newsics.com
ಬೆಂಗಳೂರು: ನಗರದ ವಿ.ವಿ.ಪುರಂ ಕಾಲೇಜಿನ ಬಳಿ ನಿಂತಿದ್ದ ಹುಡುಗಿಯರಿಗೆ ತನ್ನ ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
ಈತನ ಅಸಹ್ಯ ವರ್ತನೆ ಕಂಡು ಕಾಲೇಜು ಯುವತಿಯರು ಬೆಚ್ಚಿಬಿದ್ದಿದ್ದರು. ಸ್ಕೂಟರ್‌ನಲ್ಲಿ ಹೋಗುವಾಗ ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದನು. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಈ ವ್ಯಕ್ತಿ ಯುವತಿಯರು ಹೆಚ್ಚಾಗಿರುವ ಕಾಲೇಜು ಟಾರ್ಗೆಟ್ ಮಾಡಿಕೊಂಡು ಅಲ್ಲಿಗೆ ಹೋಗಿ ಈ ರೀತಿ ವಿಕೃತ ವರ್ತನೆ ತೋರುತ್ತಿದ್ದ.
ಬೆಂಗಳೂರಿನಲ್ಲಿ ಮಹಿಳಾ ಕಾಲೇಜುಗಳ ಬಳಿ ಹೋಗಿ ಹೆಚ್ಚಾಗಿ ವಿದ್ಯಾರ್ಥಿನಿಯರು ಓಡಾಡುವ ಸ್ಥಳಗಳನ್ನು ಟಾರ್ಗೆಟ್ ಮಾಡಿ ಅಲ್ಲಿ ತನ್ನ ಸ್ಕೂಟರ್ ನಿಲ್ಲಿಸುತ್ತಿದ್ದ.
ಕಾಲೇಜಿಗೆ ಹೋಗುವ ಮತ್ತು ಕಾಲೇಜಿನಿಂದ ವಾಪಸ್ ಒಬ್ಬಂಟಿಯಾಗಿ ಅಥವಾ ಗುಂಪು ಗುಂಪಾಗಿ ಕಾಲೇಜು ಯುವತಿಯರು ನಡೆದುಕೊಂಡು ಹೋಗುವಾಗ ಸ್ಕೂಟರ್‌ನಲ್ಲಿ ಕುಳಿತೇ ತನ್ನ ಮರ್ಮಾಂಗ ತೋರಿಸಿ ವಿಕೃತವಾಗಿ ನಡೆದುಕೊಳ್ಳುತ್ತಿದ್ದ. ಆತನನ್ನು ಹಿಡಿಯಬೇಕು ಎನ್ನುವಷ್ಟರಲ್ಲಿ ಅಲ್ಲಿಂದ ಪರಾರಿಯಾಗುತ್ತಿದ್ದ.
ವಿವಿ ಪುರಂ ಕಾಲೇಜಿನ ಬಳಿ ಸ್ಕೂಟರ್ ನಿಲ್ಲಿಸಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಮರ್ಮಾಂಗ ತೋರಿಸುವ ಕೃತ್ಯವನ್ನು ಯುವತಿಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಅದನ್ನು ಪೊಲೀಸರಿಗೆ ಕೊಟ್ಟು ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದರು.
ವಿ.ವಿ. ಪುರಂ ಪೊಲೀಸರು ಈ ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದರು. ಹಲವು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಸೋಮವಾರ ಸಂಜೆ ವೇಳೆಗೆ ಕಾಮುಕನನ್ನು ವಶಕ್ಕೆ ಪಡೆದಿದ್ದಾರೆ.
ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್ ಆಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ವಿವಿಪುರಂ ಪೊಲೀಸರು, 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
48 ವರ್ಷದ ಅಯೂಬ್ ಉರ್ ರೆಹಮಾನ್ ಬಂಧಿತ ಅರೋಪಿ. ಮಧ್ಯ ವಯಸ್ಕನಾದರೂ ವಿದ್ಯಾರ್ಥಿನಿಯರ ಮುಂದೆ ಹೀಗೆ ಅಶ್ಲೀಲವಾಗಿ ವರ್ತಿಸಿದ್ದಾನೆ.
ಬಂಧಿತ ಆರೋಪಿ ಅಯೂಬ್ ಉರ್ ರೆಹಮಾನ್ ಕಲಾಸಿಪಾಳ್ಯದಲ್ಲಿ ಟೀ ಅಂಗಡಿ ಇಟ್ಟುಕೊಂಡಿದ್ದಾನೆ. ಅತನನ್ನು ವಿಚಾರಣೆಗೊಳಪಡಿಸಿದ ಪೊಲೀಸರು ಯಾಕೆ ಹೀಗೆ ಮಾಡುತ್ತಿದ್ದೆ ಎಂದು ಕೇಳಿದರೆ, ನಾನು ಏನ್ ಮಾಡಿದ್ನೋ ನಂಗೇ ಗೊತ್ತಿಲ್ಲ ಎಂದು ಹಾರಿಕೆ ಉತ್ತರ ಕೊಟ್ಟಿದ್ದಾನೆ. ವಿವಿ ಪುರಂ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? ಆ ಕೊರಗೇ ಸಾವಿನವರೆಗೆ ಕರೆದೊಯ್ದಿತಾ?
‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ