newsics.com
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್‌ನಲ್ಲಿ ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದು ಗೆಲುವು ಯಾರಿಗೆ ಎನ್ನುವ ಕುತೂಹಲ ಹೆಚ್ಚಿಸಿದೆ.18 ವರ್ಷದ ಕನಸು ನನಸಾಗುವ ನಿರೀಕ್ಷೆಯಲ್ಲಿ ಆರ್‌ಸಿಬಿ ತಂಡವಿದ್ದರೆ, ಚಾಂಪಿಯನ್ ಪಟ್ಟದ ಮೇಲೆ ಕಿಂಗ್ಸ್ ಚಿತ್ತನೆಟ್ಟಿದೆ.
ಈ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸಂಭ್ರಮ ಆಚರಣೆಯ ವೇಳೆ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಕೊಟ್ಟರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ.
ಪಂದ್ಯದ ಬಳಿಕ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಕೆಲವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಈಗಾಗಲೇ ನಗರದ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನೂ ಸಾರ್ವಜನಿಕ ಸ್ಥಳಗಳಲ್ಲಿ ಎಲ್‌ಇಡಿ ಸ್ಕ್ರೀನ್ ಅಳವಡಿಸಿದ್ರೆ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ
.