newsics.com
ಐಪಿಎಲ್-2025 ಫೈನಲ್ ಮ್ಯಾಚ್ ಗುಜರಾತ್ ಅಹ್ಮದಾಬಾದ್ನ ಶ್ರೀ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಿವೆ. ಟಾಸ್ ಪ್ರಕ್ರಿಯೆಯಲ್ಲಿ ಪಂಜಾಬ್ ಕಿಂಗ್ಸ್ ಗೆದ್ದಿದೆ.ಸದ್ಯ ಆರ್‌ಸಿಬಿ ಟಾಸ್ ಸೋತಿರುವುದಕ್ಕೆ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ಚೇಸಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ.
ಐಪಿಎಲ್ ಟೂರ್ನಿ ಆರಂಭವಾಗಿ 18 ವರ್ಷಗಳು ಕಳೆದಿವೆ. ಪಂಜಾಬ್ ಕಿಂಗ್ಸ್ ಹಾಗೂ ಆರ್ಸಿಬಿ ಇಲ್ಲಿಯವರೆಗೆ ಒಂದೇ ಒಂದು ಟ್ರೋಫಿಯನ್ನು ಎತ್ತಿ ಹಿಡಿದಿಲ್ಲ. ಹೀಗಾಗಿ 18 ವರ್ಷಗಳ ಟ್ರೋಫಿ ಬರ ನೀಗಿಸಿಕೊಳ್ಳಲು ಎರಡು ತಂಡಗಳು ಸೆಣಸಾಟ ನಡೆಸುತ್ತಿವೆ. ಆರ್ಸಿಬಿ ತಂಡವನ್ನು ರಜತ್ ಪಾಟೀದಾರ್ ಮುನ್ನಡೆಸುತ್ತಿದ್ದರೆ, ಪಂಜಾಬ್ ಕಿಂಗ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಲೀಡ್ ಮಾಡ್ತಿದ್ದಾರೆ.