Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಮನಗರ ಜಿಲ್ಲೆ ಹೆಸರು ಬದಲು ಸಾಧ್ಯತೆ: ಡಿಸಿಎಂ ಡಿಕೆಶಿ ನೇತೃತ್ವದ ನಿಯೋಗ ಸಿಎಂಗೆ ಮನವಿ
ಕರ್ನಾಟಕ

ರಾಮನಗರ ಜಿಲ್ಲೆ ಹೆಸರು ಬದಲು ಸಾಧ್ಯತೆ: ಡಿಸಿಎಂ ಡಿಕೆಶಿ ನೇತೃತ್ವದ ನಿಯೋಗ ಸಿಎಂಗೆ ಮನವಿ

Share
1 Min Read
SHARE

newsics.com

ಬೆಂಗಳೂರು: ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ಮನವಿ‌ ಮಾಡಿದೆ.

ಈ ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು.

1986ರ ಸಾಲಿನಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಲಾಯಿತು.

ನಂತರ 2007ರ ಸಾಲಿನಲ್ಲಿ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು.

ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕುಗಳನ್ನು ಸೇರಿಸಿಕೊಂಡು ಹೊಸದಾಗಿ ರಾಮನಗರ ಜಿಲ್ಲೆಯನ್ನಾಗಿ 2007ರಲ್ಲಿ ಘೋಷಿಸಿ, ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಲಾಯಿತು.

ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲ್ಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನಮ್ಮ ಚಿಂತನೆಯೂ ಆಗಿದೆ. ಆದ್ದರಿಂದ, ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಲು ಕೋರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಬೆಂಗಳೂರು ನಾಯಕರ ತಂಡವು ಮನವಿ ಸಲ್ಲಿಸಿದೆ.

ನಾಲ್ವರನ್ನು ರಕ್ಷಿಸಿದ ನಗರಸಭಾ ಸದಸ್ಯನಿಗೇ ಪ್ರವಾಹ ಸಂಕಷ್ಟ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಶಾಲೆಗಳಿಗೆ ರಜೆ, ಜು.12ರವರೆಗೂ ಮಳೆ ಮುಂದುವರಿಕೆ

ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ

TAGGED:Ramnagar district name change possible: Delegation headed by DCM DKshi appeals to CM
Share This Article
Facebook Twitter Copy Link Print
Previous Article ನಾಲ್ವರನ್ನು ರಕ್ಷಿಸಿದ ನಗರಸಭಾ ಸದಸ್ಯನಿಗೇ ಪ್ರವಾಹ ಸಂಕಷ್ಟ
Next Article ರಷ್ಯಾ ಸೇನೆಯಲ್ಲಿನ ಭಾರತೀಯರ ಶೀಘ್ರ ಬಿಡುಗಡೆಗೆ ಪುಟಿನ್ ಭರವಸೆ: ಭಾರತಕ್ಕೆ ರಾಜತಾಂತ್ರಿಕ ಗೆಲುವು

Popular Posts

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?