newsics.com
ತಮಿಳುನಾಡು: ಶುಕ್ರವಾರ ಬೆಳಿಗ್ಗೆ ತಮಿಳುನಾಡು ಬಳ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅವರ ಕುಟುಂಬದ ಕಾರು ಅಪಘಾತಕ್ಕೀಡಾಗಿದ್ದು, ಅವರ ತಂದೆ 70 ವರ್ಷದ ಸಿಬಿ ಚಾಕೊ ಸ್ಥಳದಲ್ಲೇ ಸಾವನ್ನಪ್ಪಿದರೆ, ಶೈನ್ ಹಾಗೂ ಅವರ ತಾಯಿಗೆ ಗಂಭೀರ ಗಾಯಗಳಾಗಿವೆ.
ತಮಿಳುನಾಡಿನ ಧರ್ಮಪುರಿಯ ಪಾಲಕೊಟ್ಟೈ ಬಳಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ಸಮಯದಲ್ಲಿ, ಶೈನ್ ಅವರ ತಾಯಿ, ಸಹೋದರ, ತಂದೆ ಮತ್ತು ಚಾಲಕನೊಂದಿಗೆ ಪ್ರಯಾಣಿಸುತ್ತಿದ್ದರು. ಶೈನ್ ಮತ್ತು ಅವರ ತಾಯಿಯನ್ನು ಧರ್ಮಪುರಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಗಾಯಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.