newsics.com
ವಿಶ್ವದ ಅತಿ ಎತ್ತರದ ರೈಲ್ವೆ ಬ್ರಿಡ್ಜ್ ಅನ್ನು ಜಮ್ಮು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.
ಈ ಸೇತುವೆಯನ್ನು ಅಂದಾಜು 1,400 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಪ್ಯಾರಿಸ್‌ನ ಐಫೆಲ್ ಟವರ್‌ಗಿಂತಲೂ 35 ಮೀ. ಎತ್ತರದಲ್ಲಿ ನಿರ್ಮಾಣವಾಗಿದೆ. ಚೆನಾಬ್ ಸೇತುವೆ ಚೆನಾಬ್ ನದಿ ಮಟ್ಟದಿಂದ 359 ಮೀ. ಎತ್ತರದಲ್ಲಿ ನಿರ್ಮಾಣವಾಗಿದ್ದು, 1.3 ಕಿ.ಮೀ. ಉದ್ದವಿದೆ. ಎಂಜಿನಿಯರಿಂಗ್ ಅದ್ಭುತ ಎಂದು ಕರೆಯಲ್ಪಡುವ 1,315 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆಯನ್ನು ಕಠಿಣ ಭೂಕಂಪ ಮತ್ತು ಬಿರುಗಾಳಿಯ ಪರಿಸ್ಥಿತಿಗಳನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ. ಇದು ಭಾರತೀಯ ರೈಲ್ವೆ ನಿರ್ಮಾಣದಲ್ಲಿ ಹೊಸ ಯುಗದ ಆರಂಭದ ಸಂಕೇತವಾಗಿದೆ.