newsics.com
ಬೆಂಗಳೂರು: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿದ್ದ ಗೋವಿಂದರಾಜ್ ಅವರಿಗೆ ಗೇಟ್‌ಪಾಸ್ ನೀಡಲಾಗಿದೆ.
ಕೆಎಸ್‌ಸಿಎ ಪರವಾಗಿ ಸಿಎಂ ಮೇಲೆ ಒತ್ತಡ ಹಾಕಿ ಸನ್ಮಾನ ಕಾರ್ಯಕ್ರಮ ನಡೆಯಲು ಕಾರಣರಾಗಿದ್ದರೆಂಬ ಆರೋಪ ಕೆ.ಗೋವಿಂದರಾಜ್ ಮೇಲಿದೆ.
ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೂಲಕ ಕಾರ್ಯಕ್ರಮ ಆಯೋಜನೆ ಪ್ರಕರಣದಿಂದ ತೀವ್ರ ಮುಜುಗರಕ್ಕೊಳಗಾಗಿರುವ ಸರ್ಕಾರ, ಗೋವಿಂದರಾಜು ಒತ್ತಡದಿಂದಲೇ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ ಎಂದು ಗೋವಿಂದರಾಜು ವಿರುದ್ದ ಸಿಎಂ ಆಪ್ತರು ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಸಿಎಂ ಸಿದ್ದರಾಮಯ್ಯ ಅವರು ತೆರವುಗೊಳಿಸಿ ಆದೇಶಿಸಿದ್ದಾರೆ