ನಟಿ ಮೇಲೆ ಅತ್ಯಾಚಾರ ಮತ್ತು ಬಲವಂತವಾಗಿ ಗರ್ಭಪಾತ ಮಾಡಿಸಿದ ಆರೋಪ ಎದುರಿಸುತ್ತಿರುವ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು ಅವರನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.
ಇದೀಗ ಮಡೆನೂರು ಮನು ಅವರಿಗೆ ಈ ಕೇಸ್ನಲ್ಲಿ ಜಾಮೀನು ನೋಡಲಾಗಿದೆ. ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಅವರು ಶನಿವಾರ (ಜೂನ್ 7) ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ.
ಮಡೆನೂರು ಮನು ವಿರುದ್ಧ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿತ್ತು. ದೂರುದಾರ ಮಹಿಳೆಯು, ಮನು ಅವರು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ. ನಂತರ ಮದುವೆಗೆ ನಿರಾಕರಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದರು. ದೂರಿನ ಪ್ರಕಾರ, ಮಡೆನೂರು ಮನು ಮತ್ತು ದೂರುದಾರ ಮಹಿಳೆ ಪರಸ್ಪರ ಪರಿಚಿತರಾಗಿದ್ದರು. ಮನು ಅವರು ಮಹಿಳೆಗೆ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಇಬ್ಬರು ಕೂಡ ಕಾಮಿಡಿ ಕಿಲಾಡಿಗಳು ಶೋನಲ್ಲಿ ಒಟ್ಟಿಗೆ ಭಾಗವಹಿಸಿದ್ದರು.