newsics.com
ಬೆಂಗಳೂರು: ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಲಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ನಡೆದು 11 ಮಂದಿ RCB ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ಭೇಟಿ ಕುತೂಹಲ ಕೆರಳಿಸಿದೆ.
ನಾಡಿದ್ದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಮೊಮ್ಮಗನ ಮದುವೆ ನಿಶ್ಚಯವಾಗಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನಾಳೆ ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ, ನಾಡಿದ್ದು ಬೆಳಗ್ಗೆ ನಡೆಯುವ ಮದುವೆ ಮುಹೂರ್ತದಲ್ಲಿ ಭಾಗಿಯಾಗಲಿದ್ದಾರೆ.