ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿ ವಿನಯ್ ಕುಲಕರ್ಣಿ ಜಾಮೀನು ರದ್ದುಪಡಿಸಲಾಗಿದೆ.
ಸುಪ್ರೀಂಕೋರ್ಟ್ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದು ಮಾಡಿದೆ. ಸಾಕ್ಷಿಗಳಿಗೆ ಒಂದು ಲಕ್ಷ ರೂಪಾಯಿ ಹಣದ ಆಮಿಷವೊಡ್ಡಿರುವುದರಿಂದ ಜಾಮೀನು ರದ್ದು ಕೋರಿ ಸಿಬಿಐ ಮನವಿ ಮಾಡಿತ್ತು.
ಜಾಮೀನು ರದ್ದುಪಡಿಸಿದ ಸುಪ್ರೀಂಕೋರ್ಟ್ ಒಂದು ವಾರದಲ್ಲಿ ಕೋರ್ಟ್ ಮುಂದೆ ಶರಣಾಗಲು ವಿನಯ್ ಕುಲಕರ್ಣಿಗೆ ಆದೇಶ ನೀಡಿದೆ. ಜಾಮೀನು ರದ್ದುಪಡಿಸಿದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಜೈಲು ಸೇರಲಿದ್ದಾರೆ.
ಪ್ರಸ್ತುತ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿರುವ ವಿನಯ್ ಕುಲಕರ್ಣಿ ಮೇಲೆ 2016 ರಲ್ಲಿ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆಯಲ್ಲಿ ಪಿತೂರಿ ನಡೆಸಿದ ಆರೋಪವಿದೆ. ಆಗ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು