newsics.com
ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಈ ಪ್ರಕರಣದ ಬಗ್ಗೆ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಕಾರ್ಯಕ್ರಮದ ಆಯೋಜಕರಾದ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕೂಡ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ಪ್ರಶ್ನಿಸಿ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದೆ.
RCB ಮಾಲಕ ಸಂಸ್ಥೆ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಲಿಮಿಟೆಡ್ (RCSL), ಈ ಪ್ರಕರಣದಲ್ಲಿ ತನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ ಎಂದು ವಾದ ಮಂಡಿಸಿದೆ.