newsics.com
ನವದೆಹಲಿ: ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿ ನಡೆಸಿದ್ದಾರೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಲೆ ಸಂಭವಿಸಿದೆ ಕಾಲ್ತುಳಿತ ಪ್ರಕರಣದ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ.
ಇನ್ನು ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಿದರು. ಮುಖ್ಯವಾಗಿ ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆ ಆಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಸಮೀಕ್ಷೆ ಮಾಡಲು ಹೇಳಿದ್ದಾರೆ. ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದು ಸ್ಪಷ್ಟಪಡಿಸಿದರು.
ಕಾಲ್ತುಳಿತ ದುರಂತ ಪ್ರಕರಣದ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಗಿದ್ದು, ಕೈಗೊಂಡಿರುವ ಕ್ರಮದ ಬಗ್ಗೆ ವಿವರಣೆ ನೀಡಿದ್ದೇವೆ. ಸಿಐಡಿ, ನ್ಯಾ.ಕುನ್ಹಾ ನೇತೃತ್ವದ ತನಿಖೆ ಬಗ್ಗೆ ಮಾಹಿತಿ ನೀಡಿದ್ದೇವೆ. ಪೊಲೀಸ್ ಅಧಿಕಾರಿಗಳ ಅಮಾನತು, ಇಂಟಲಿಜೆನ್ಸ್ ಮುಖ್ಯಸ್ಥರ ವರ್ಗಾವಣೆ ಈ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಲಾಗಿದೆ ಎಂದರು.
Namma Metro ಬಣ್ಣ ಬದಲಿಸಿದ ನಮ್ಮ ಮೆಟ್ರೋ: ವರ್ಷಕ್ಕೆ 25 ಕೋಟಿ ನಿರೀಕ್ಷೆ