newsics.com
ಮೈಸೂರು: ತಾಯಿ ಚಾಮುಂಡೇಶ್ವರಿ ಜನ್ಮೋತ್ಸವ ಹಾಗೂ ಆಷಾಢ ಶುಕ್ರವಾರಗಳ ಆಚರಣೆಯ ಪ್ರಯುಕ್ತ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮೂಲ ಸೌಕರ್ಯಗಳೊಂದಿಗೆ ಹಲವಾರು ಅನುಕೂಲ ವ್ಯವಸ್ಥೆಗಳನ್ನು ಮಾಡಲಾಗಿದೆ.
ಆಷಾಢ ಮಾಸದಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಅಸಂಖ್ಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಯಾವುದೇ ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶವಿರುವುದಿಲ್ಲ. ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಬಹುದು ಎಂದು ಸಚಿವ ಡಾ.ಎಚ್.ಸಿ. ಮಹಾದೇವಪ್ಪ ತಿಳಿಸಿದರು.
ಭಕ್ತಾದಿಗಳು ವಾಹನಗಳನ್ನು ಲಲಿತಾ ಮಹಲ್ ಹೋಟೆಲ್ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಬೇಕು. ಜೂನ್ 27, ಜುಲೈ 04, ಜುಲೈ 11, ಜುಲೈ 18 ರಂದು ಆಷಾಢ ಶುಕ್ರವಾರಗಳು ಹಾಗೂ ಜುಲೈ 17 ರಂದು ಚಾಮುಂಡೇಶ್ವರಿ ದೇವಿಯ ವರ್ಧಂತಿ ನಡೆಯಲಿದೆ.
ಆಷಾಢ ಶುಕ್ರವಾರ ಹಾಗೂ ಆಷಾಢ ಮಾಸದ ಶನಿವಾರ ಹಾಗೂ ಭಾನುವಾರಗಳಂದು ಸಾಮಾನ್ಯ ದರ್ಶನ ಉಚಿತವಾಗಿರುತ್ತದೆ. ಪ್ರವೇಶ ದರ್ಶನಕ್ಕೆ 50 ರೂ. ಹಾಗೂ ವಿಶೇಷ ದರ್ಶನಕ್ಕೆ 300 ರೂ. ಟಿಕೆಟ್ ನಿಗದಿ ಪಡಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.