newsics.com
ಬಿಗ್ ಬಾಸ್ ಹೊಸ ಸೀಸನ್‌ಗೆ ಭರ್ಜರಿ ತಯಾರಿ ಶುರುವಾಗಿದೆ. ಬಿಗ್ ಬಾಸ್ ಕನ್ನಡ 12 ಕಾರ್ಯಕ್ರಮದ ಸಿದ್ದತೆಗೆ ಈಗಾಗಲೇ ಚಾಲನೆ ಸಿಕ್ಕಿದ್ದು, ಈ ಬಾರಿಯೂ ಹೋಸ್ಟ್ ಆಗಿ ಕಿಚ್ಚ ಸುದೀಪ್ ಅವರೇ ಮುಂದುವರೆಯುತ್ತಾರಂತೆ. ಇದಕ್ಕಾಗಿ ಕಿಚ್ಚ ಸುದೀಪ್ ಕೆಲವು ಕಂಡೀಷನ್‌ಗಳನ್ನ ಹಾಕಿದ್ದಾರೆ ಎನ್ನಲಾಗಿದೆ.
ಈ ಬಾರಿ ದೊಡ್ಮನೆಗೆ ಯಾರೆಲ್ಲಾ ಸ್ಪರ್ಥಿಗಳು ಹೋಗುತ್ತಾರೆ ಎಂಬ ಡೌಟ್ ವೀಕ್ಷಕರಿಗೆ ಕಾಡುತ್ತಿದೆ. ಇನ್ನು ಸಾಮಾನ್ಯವಾಗಿ ಬಿಗ್ ಬಾಸ್ ಇಲ್ಲಿಯವರೆಗೆ ಮೂರು ತಿಂಗಳು ನಡೆಯುತ್ತಿತ್ತು. 15 ರಿಂದ 20 ಸ್ಫರ್ಧಿಗಳು ಇರುತ್ತಿದ್ದರು. ಸೆಪ್ಟೆಂಬರ್ ಅಥವಾ ಅಕ್ಟೋಬರ್ ವೇಳೆಗೆ ಕಾರ್ಯಕ್ರಮ ಶುರುವಾಗುತ್ತಿತ್ತು. ಆದರೆ ಈ ವರ್ಷ ವಿಭಿನ್ನವಾಗಿರಲಿದೆ.
ಭಾರೀ ಬದಲಾವಣೆಯೊಂದಿಗೆ ಬಿಗ್ ಬಾಸ್ ಜನರ ಎದುರು ಬರಲಿದೆ. ವರದಿಯ ಪ್ರಕಾರ ಈ ಬಾರಿ ಐದೂವರೆ ತಿಂಗಳು ಬಿಗ್ ಬಾಸ್ ಕಾರ್ಯಕ್ರಮ ನಡೆಯಲಿದೆ. ಜುಲೈ 30 ರಿಂದ ಬಿಗ್ ಬಾಸ್ ಕಾರ್ಯಕ್ರಮ ಶುರುವಾಗಲಿದೆ ಎನ್ನಲಾಗಿದೆ. ಜನವರಿ 2026ರ ಬಿಗ್ ಬಾಸ್ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಬಿಗ್ ಬಾಸ್ ಸ್ಫರ್ಧಿಗಳ ಹುಡುಕಾಟ ಶುರುವಾಗಿದ್ದು 7 ಸ್ಫರ್ಧಿಗಳ ಹೆಸರನ್ನು ‘ಡೆಕ್ಕನ್ ಕ್ರೋನಿಕಲ್’ ಪತ್ರಿಕೆ ಬಹಿರಂಗಗೊಳಿಸಿದೆ. ಆ ಪ್ರಕಾರ, ಯೂಟ್ಯೂಬರ್ ಗೌರವ್ ತನೇಜಾ, ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಬಿಗ್ ಬಾಸ್ ಮನೆಯನ್ನು ಪ್ರವೇಶಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಒಂದು ಕಾಲದ ಖ್ಯಾತ ಹೀರೋಯಿನ್ ಬಣ್ಣದ ಲೋಕದಿಂದ ದೂರವಾಗಿ ಸನ್ಯಾಸ ದೀಕ್ಷೆ ಪಡೆದ ಮಮತಾ ಕುಲಕರ್ಣಿ ಕೂಡ ಈ ಬಾರಿ ಬಿಗ್ ಬಾಸ್ ಪ್ರವೇಶಿಸಲಿದ್ದಾರೆ ಎನ್ನಲಾಗ್ತಿದೆ. ಕೃಷ್ಣಾ ಶ್ರಾಫ್, ಮಿಕ್ಕಿ ಮೇಕ್ ಓವರ್, ಫೈಸಲ್ ಶೇಖ್, ಧೀರಜ್ ಧೋಪರ್ ಕೂಡ ಬಿಗ್ ಬಾಸ್ ಮನೆಗೆ ಈ ಸಲ ಎಂಟ್ರಿ ಕೊಡಲಿದ್ದಾರೆ ಎಂದು ವರದಿಯಾಗಿದೆ.
ಬಿಗ್ ಬಾಸ್ ಹಿಂದಿ ಸೀಸನ್ 19 ನ್ನು ಕೂಡ ಸಲ್ಮಾನ್ ಖಾನ್ ನಿರೂಪಣೆ ಮಾಡಲಿದ್ದಾರೆ. ಇನ್ನು ಈ ಬಾರಿ ಸಲ್ಮಾನ್ ಖಾನ್ ಬಿಗ್ ಬಾಸ್ ನಿರೂಪಣೆಗೆ 300 ಕೋಟಿ ಸಂಭಾವನೆ ಪಡೆಯಲಿದ್ದಾರೆ ಎಂದು ಸಿಯಾಸತ್ ಡಾಟ್ ಕಾಮ್ ಮತ್ತು ಬಾಲಿವುಡ್ ಲೈಫ್ ವೆಬ್ ಸೈಟ್‌ಗಳು ವರದಿ ಮಾಡಿವೆ. ಈ ಬಗ್ಗೆ ಯಾವುದೇ ನಿಖರ ಮಾಹಿತಿ ಹೊರ ಬಿದ್ದಿಲ್ಲ.
ಬಿಗ್ ಬಾಸ್ ಗೆ ಪ್ರವೇಶಿಸಲಿರುವ ಸಂಭಾವ್ಯ ಸ್ಫರ್ಧಿಗಳ ಪಟ್ಟಿ ಕೇಳಿ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆ ಶುರುವಾಗಿದೆ. ಈ 7 ಜನರ ಜೊತೆ ಮತ್ತೆ ಯಾರೆಲ್ಲ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಎಂಟ್ರಿ ಪಡೆಯಲಿದ್ದಾರೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.
CM Siddaramaiah ಹೊಸ ಜಿಲ್ಲೆಗಳ ರಚನೆ ಕುರಿತು ಬಿಗ್ ಅಪ್‌ಡೇಟ್ ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?