newsics.com
ತೀರ್ಥಹಳ್ಳಿ: ಕಾಂತಾರ ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ತೀರ್ಥಹಳ್ಳಿಯ ಆಗುಂಬೆ ಬಳಿ ನಡೆದಿದೆ.
ವಿಜು ವಿ. ಕೆ ಎಂಬ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು.
ಅವರಿಗೆ ನಿನ್ನೆ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮೃತ ದೇಹ ಇರಿಸಲಾಗಿದೆ. ಕೇರಳದಿಂದ ಕುಟುಂಬಸ್ಥರು ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ತಿಂಗಳು ಕಾಂತಾರ ಚಿತ್ರದ ಟೆಕ್ನಿಷಿಯನ್ ಕಪಿಲ್ ಎಂಬುವವರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಕೇರಳ ಮೂಲದ ಕಲಾವಿದ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಬಳಿಕ ಕಾಂತಾರಾ ಸಿನಿಮಾದಲ್ಲಿ ನಟನೆ ಮಾಡಿದ್ದ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಅವರು ಕೂಡಾ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮದುವೆ ಕಾರ್ಯಕ್ರಮವೊಂದರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು.
ಇದಕ್ಕೂ ಮುನ್ನ ಕಾಂತಾರ ಸಹ ಕಲಾವಿದರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಪಲ್ಟಿಯಾಗಿ ಕೆಲವರಿಗೆ ಗಾಯಗಳಾಗಿತ್ತು. ಇನ್ನು ಕಾಂತಾರ ಮೊದಲ ಪಾರ್ಟ್‌ನಲ್ಲಿ ಗುರುವ ಪಾತ್ರದಲ್ಲಿ ನಟಿಸಿದ್ದ ಸ್ವರಾಜ್ ಶೆಟ್ಟಿ ಅವರ ʼನೆತ್ತರೆಕೆರೆʼ ಸಿನಿಮಾ ಸೆಟ್ಟಿಗೆ ಬೆಂಕಿ ಹೊತ್ತಿಕೊಂಡಿತ್ತು. ಕಾಂತಾರ ಸಿನಿಮಾಗೆ ಈ ರೀತಿಯ ಸಾಲು ಸಾಲು ಅವಘಡಗಳು ಆತಂಕವನ್ನು ಮೂಡಿಸಿದೆ.
High Court ಕಾಲ್ತುಳಿತ ಪ್ರಕರಣ : ಇಂದು ಹೈಕೋರ್ಟ್ ನಿಂದ ಸ್ವಯಂ ಪ್ರೇರಿತ ಪಿಐಎಲ್ ವಿಚಾರಣೆ