newsics.com
ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಛತ್ರಪತಿ ಸಂಭಾಜಿ ನಗರದಲ್ಲಿ ಭಾರೀ ಮಳೆ ಮತ್ತು ಗಾಳಿಯಿಂದಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಗಾರ್ಡನ್ ಬಳಿಯ ಪ್ರವೇಶ ದ್ವಾರ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ಇನ್ನು ಘಟನೆಯಲ್ಲಿ ಮತ್ತಿಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ
ಗೇಟ್ ಬಳಿ ನಿಂತಿದ್ದಾಗ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಕೆಳಗೆ ಸಿಲುಕಿಕೊಂಡಿದ್ದರಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಇನ್ನೂ ಗಾಯಗೊಂಡ ಇಬ್ಬರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೃತರ ಕುಟುಂಬಕ್ಕೆ ಪುರಸಭೆಯಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.
Food Delivery ಝೀರೋ ಕಮಿಷನ್, ಆಫ್‌ಲೈನ್‌ನಷ್ಟೇ ಬೆಲೆ; ಫುಡ್ ಡೆಲಿವರಿಗೂ ಇಳಿದ ರ‍್ಯಾಪಿಡೋ!