newsics.com
ಗುಜರಾತ್ನ ಅಹ್ಮದಾಬಾದ್ನಲ್ಲಿ ವಿಮಾನ ಪತನಗೊಂಡಿದೆ. ಅಹ್ಮದಾಬಾದ್ ಏರ್ಪೋರ್ಟ್ನಿಂದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಐದು ನಿಮಿಷದಲ್ಲಿ ಮೇಘನಿನಗರ್ ದಲ್ಲಿ ಪತನಗೊಂಡಿದೆ.ಈ ಬೆನ್ನಲ್ಲೇ ಅಹಮದಾಬಾದ್ ಏರ್ ಪೋರ್ಟ್ ನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ
ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಒಟ್ಟು 242 ಪ್ರಯಾಣಿಕರಿದ್ದರು. ಅವರಲ್ಲಿ 230 ಪ್ರಯಾಣಿಕರು, 12 ಮಂದಿ ಸಿಬ್ಬಂದಿಯಿದ್ದರು.
ಏರ್ ಇಂಡಿಯಾ ವಿಮಾನ ಪತನಗೊಂಡಿರುವ ಬೆನ್ನಲ್ಲೇ ಅಹಮದಾಬಾದ್ ಏರ್ ಪೋರ್ಟ್ ನ್ನು ಕೆಲ ಸಮಯದವರೆಗೆ ಬಂದ್ ಮಾಡಲಾಗಿದೆ. ಏರ್ ಇಂಡಿಯಾದ ಎಲ್ಲಾ ವಿಮಾನಗಳ ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳಿಸಲಾಗಿದೆ. ಸಂಜೆ 5 ಗಂಟೆಯವರೆಗೆ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.