newsics.com
ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ವಿಮಾನ ಅಪಘಾತದಲ್ಲಿ 241 ಜನರು ಮೃತಪಪಟ್ಟಿದ್ದಾರೆ. ಕೇವಲ ಓರ್ವ ವ್ಯಕ್ತಿ ಬಚಾವಾಗಿದ್ದಾರೆ. ಈ ದುರಂತ ನಡೆದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಪರಿಶೀಲನೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಅಹಮದಾಬಾದ್ ವಿಮಾನ ಅಪಘಾತದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು, ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮತ್ತು ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಕೂಡ ಅವರೊಂದಿಗೆ ಇದ್ದಾರೆ.
232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1.17 ಕ್ಕೆ ಲಂಡನ್’ಗೆ ಹೊರಟಾಗ ಈ ದುರಂತ ಸಂಭವಿಸಿದೆ.