newsics.com
ಬೆಂಗಳೂರು: ಭಾರತದಲ್ಲಿ ಚಿನ್ನಾಭರಣ ಪ್ರಿಯರಿಗೆ ಗೋಲ್ಡ್ ದರ ಮೇಲಿಂದ ಮೇಲೆ ಶಾಕ್ ನೀಡುತ್ತಿದೆ. ಇತ್ತೀಚೆಗೆ ಒಂದು ಲಕ್ಷ ರೂಪಾಯಿ ತಲುಪಿದ್ದ ಚಿನ್ನದ ಬೆಲೆ ನಿರಂತರವಾಗಿ ಏರಿಳಿಕೆಯಿಂದ ಕೂಡಿತ್ತು. ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಏರಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ ಮೊದಲ ಬಾರಿಗೆ 7,600 ರೂ ಗಡಿ ದಾಟಿದೆ. ಅಪರಂಜಿ ಚಿನ್ನವೂ ಮೊದಲ ಬಾರಿಗೆ 1.01 ಲಕ್ಷ ರೂ ಗಡಿ ದಾಟಿದೆ. ಬೆಲೆ ಏರಿಕೆಯಲ್ಲಿ ಚಿನ್ನದೊಂದಿಗೆ ಬೆಳ್ಳಿಯೂ ಪೈಪೋಟಿ ನಡೆಸಿದೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ಬೆಲೆ 110 ರೂ ಮುಟ್ಟಿದೆ. ಚೆನ್ನೈನಲ್ಲಿ ಬೆಲೆ ಮೊದಲ ಬಾರಿಗೆ 120 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,01,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,000 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,950 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,400 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ