Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bike taxi service suspended ರಾಜ್ಯದಲ್ಲಿ ಜೂನ್ 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ: ಹೈಕೋರ್ಟ್ ಆದೇಶ
ಕರ್ನಾಟಕಪ್ರಮುಖ

Bike taxi service suspended ರಾಜ್ಯದಲ್ಲಿ ಜೂನ್ 16ರಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ: ಹೈಕೋರ್ಟ್ ಆದೇಶ

Share
2 Min Read
SHARE

newsics.com

ಬೆಂಗಳೂರು: ಇದೇ ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಪೂರ್ಣವಾಗಿ ಬ್ಯಾನ್ ಆಗಲಿದೆ.

ಓಲಾ, ಉಬರ್, ರ‌್ಯಾಪಿಡೋ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆಯನ್ನು ಅನಿವಾರ್ಯವಾಗಿ ಸ್ಥಗಿತಗೊಳಿಸಬೇಕಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ನಗರ, ಪಟ್ಟಣಗಳಲ್ಲಿ ಈ ಸೇವೆ ಬಂದ್ ಆಗಲಿದೆ.

ಕಡಿಮೆ ಖರ್ಚಿನಲ್ಲಿ ಟ್ರಾಫಿಕ್‌ನಲ್ಲಿ ಹೆಚ್ಚಿನ ಸಮಯ ವ್ಯರ್ಥ ಮಾಡದೇ ಬೇಗನೆ ನಿಗದಿತ ಸ್ಥಳ ತಲುಪಬಹುದಾಗಿದ್ದ ಸೇವೆ ಸ್ಥಗಿತಗೊಳ್ಳುತ್ತಿರುವುದು ಹಲವರಿಗೆ ಕಷ್ಟವಾಗಲಿದೆ.

ಸೇವೆ ಸ್ಥಗಿಗೊಳಿಸುವ ಸಂಬಂಧ ಈಗಾಗಲೇ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿ ಬೈಕ್ ಟ್ಯಾಕ್ಸಿಗೆ ಅನುವು ಮಾಡಿಕೊಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಅಷ್ಟೇ ಅಲ್ಲ, ಆದೇಶವನ್ನು ಎತ್ತಿಹಿಡಿದಿದೆ.

ಡಿವಿಜನ್ ಬೆಂಚ್ ಚೀಫ್ ಜಸ್ಟಿಸ್ ಕಾಮೇಶ್ವರ್ ರಾವ್ ಹಾಗೂ ಜಸ್ಟೀಸ್ ಶ್ರೀನಿವಾಸ್ ಹರೀಶ್ ಕುಮಾರ್ ಓಲಾ, ಉಬರ್, ರ‌್ಯಾಪಿಡೋ ಸೇರಿದಂತೆ ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿರುವ ಕಂಪನಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿತು.

ಏಪ್ರಿಲ್ 2 ರಂದು ಹೈಕೋರ್ಟ್‌ನ ಏಕಸದಸ್ಯ ಪೀಠದ ಜಸ್ಟೀಸ್ ಶ್ಯಾಮ್ ಪ್ರಸಾದ್ ಈ ಈ ಕುರಿತು ಆದೇಶ ಹೊರಡಿಸಿದ್ದರು. ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಲು ಸೂಚಿದ್ದರು. ಈ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ವಿಭಾಗೀಯ ಪೀಠ, ಜೂನ್ 20ರೊಳಗೆ ಟ್ಯಾಕ್ಸಿ ಅಗ್ರಿಗೇಟರ್ ಉತ್ತರ ಸಲ್ಲಿಸುವಂತೆ ಕೋರ್ಟ್ ಹೇಳಿದೆ. ಮುಂದಿನ ವಿಚಾರಣೆಯನ್ನು ಜೂನ 24ಕ್ಕೆ ಮುಂದೂಡಿದೆ.

ಸರ್ಕಾರ ಬೈಕ್ ಟ್ಯಾಕ್ಸಿ ಕುರಿತು ಸ್ಪಷ್ಟ ಕಾನೂನು ರೂಪಿಸುವವರೆಗೆ ಬೈಕ್ ಟ್ಯಾಕ್ಸಿ ಬ್ಯಾನ್ ಇರಲಿದೆ ಎಂದು ವಿಭಾಗೀಯ ಪೀಠ ಹೇಳಿದೆ. ಬೈಕ್ ಟ್ಯಾಕ್ಸಿ ಕುರಿತು ಸ್ಪಷ್ಟ ನೀತಿ ನಿಮಮಗಳು ಜಾರಿಯಾಗುವವರೆಗೆ ಬ್ಯಾನ್ ಮುಂದುವರಿಯಲಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ. ಆದೇಶದಲ್ಲಿ ಸೋಮವಾರದಿಂದಲೇ (ಜೂ.16) ಕರ್ನಾಟಕದಲ್ಲಿ ಎಲ್ಲಾ ಬೈಕ್ ಟ್ಯಾಕ್ಸಿ ಬ್ಯಾನ್ ಎಂದು ಉಲ್ಲೇಖಿಸಿದೆ. ಹೀಗಾಗಿ ಸೋಮವಾರದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಇರುವುದಿಲ್ಲ ಎಂದಿದೆ.

ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಯಮ ರೂಪಿಸಲು ಹೆಚ್ಚು ಆಸಕ್ತಿ ಹೊಂದಿಲ್ಲ. ಹೀಗಾಗಿ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಜಾರಿಗೆ ಬರುವ ಸಾಧ್ಯತೆಗಳು ಕಡಿಮೆ ಎಂದೇ ಹೇಳಲಾಗುತ್ತಿದೆ. ಬೈಕ್ ಟ್ಯಾಕ್ಸಿ ನೀತಿ ಜಾರಿಯಾದರೆ ಎಲ್ಲರಿಗೂ ಸುರಕ್ಷತೆ ನೀಡುವುದು ಸವಾಲಾಗಲಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನಲ್ಲಿ ಬಹುತೇಕರು ಬೈಕ್ ಟ್ಯಾಕ್ಸಿ ಪ್ರಯಾಣ ನೆಚ್ಚಿಕೊಂಡಿದ್ದರು. ಒಂದೆಡೆ ಮೆಟ್ರೋಗೆ ದುಬಾರಿ ದರ ಮಾಡಲಾಗಿದೆ. ಇತ್ತ ಆಟೋ ಹಾಗೂ ಕ್ಯಾಬ್ ದರ ಹೆಚ್ಚು ಜತೆಗೆ ಟ್ರಾಫಿಕ್‌ನಲ್ಲಿ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ. ಆದರೆ ಬೈಕ್ ಟ್ಯಾಕ್ಸಿ ಸುಲಭ ಹಾಗೂ ಕಡಿಮೆ ಖರ್ಚಿನಲ್ಲಿ ನಿಗಿದಿತ ಸ್ಥಳ ತಲುಪಲು ಸಾಧ್ಯವಾಗಿತ್ತು.

Air India flight ವಿಮಾನ ಪತನಕ್ಕೂ ಮೊದಲು ಪ್ರಯಾಣಿಕರ ಕಿರುಚಾಟ; ವೈರಲ್ ವಿಡಿಯೋ ನೋಡಿ

Air India flight ಪತ್ನಿಯ ಚಿತಾಭಸ್ಮ ಬಿಡಲು ಬಂದಿದ್ದ ಪತಿ ವಿಮಾನ ಅಪಘಾತದಲ್ಲಿ ಮೃತ; ತಂದೆಯ ಬರುವಿಕೆಗಾಗಿ ಕಾದು ಕುಳಿತ ಮಕ್ಕಳು

TAGGED:Bike taxi service to be suspended in the state from June 16: High Court order
Share This Article
Facebook Twitter Copy Link Print
Previous Article Air India flight ವಿಮಾನ ದುರಂತ ಸ್ಥಳದಲ್ಲಿ ಬ್ಲ್ಯಾಕ್ ಬಾಕ್ಸ್ ಪತ್ತೆ
Next Article Air India flight ವಿಮಾನ ದುರಂತ ಪ್ರಕರಣ: ಸಾವಿನ ಸಂಖ್ಯೆ 270ಕ್ಕೆ ಏರಿಕೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?