newsics.com
ತೆಲಂಗಾ: ಮೇದಕ್ ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಮಂಗಳವಾರ ನೀಡಿದ ಬೆಳಗಿನ ತಿಂಡಿಯಲ್ಲಿ ಹಲ್ಲಿ ಪತ್ತೆಯಾಗಿದೆ. 35 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ರಾಮಯಂಪೇಟೆಯ ಟಿಜಿ ಮಾಡೆಲ್ ಸ್ಕೂಲ್‌ನ ವಿದ್ಯಾರ್ಥಿಗಳು ತಿಂಡಿ ತಿಂದ ಬಳಿಕ ಅಸ್ವಸ್ಥರಾಗಿದ್ದರು. ವಾಂತಿ, ಬೇಧಿ ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಿರ್ಲಕ್ಷ್ಯದ ಆರೋಪದ ಮೇಲೆ ಅಡುಗೆಯವರು ಮತ್ತು ಸಹಾಯಕ ಅಡುಗೆಯವರನ್ನು ವಜಾಗೊಳಿಸಲಾಗಿದ್ದು, ಹಾಸ್ಟೆಲ್‌ನ ಉಸ್ತುವಾರಿ ಮತ್ತು ವಿಶೇಷ ಅಧಿಕಾರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಮೇದಕ್ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ತಿಳಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ ಆಹಾರವನ್ನು ತಯಾರಿಸುವ ಸಮಯದಲ್ಲಿ ಹಲ್ಲಿ ಆಕಸ್ಮಿಕವಾಗಿ ಬಿದ್ದಿರಬಹುದು ಎಂದು ಹೇಳಲಾಗುತ್ತಿದೆ.
ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಲಾ ಆಡಳಿತ ಮಂಡಳಿ ಭರವಸೆ ನೀಡಿದೆ.