Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Father’s Day 2025: ಮಕ್ಕಳ ಪಾಲಿನ ರಿಯಲ್ ಹೀರೋ ಅಪ್ಪ ; ವಿಶ್ವ ಅಪ್ಪಂದಿರ ದಿನದ ಮಹತ್ವವೇನು?
ಪ್ರಮುಖ

Father’s Day 2025: ಮಕ್ಕಳ ಪಾಲಿನ ರಿಯಲ್ ಹೀರೋ ಅಪ್ಪ ; ವಿಶ್ವ ಅಪ್ಪಂದಿರ ದಿನದ ಮಹತ್ವವೇನು?

Share
2 Min Read
SHARE

newsics.com

ಜೂನ್ 15 ರಂದು ವಿಶ್ವ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತದೆ. ತನ್ನ ಕಷ್ಟಗಳನ್ನು ಮುಚ್ಚಿಟ್ಟು ಮಕ್ಕಳ ಭವಿಷ್ಯಕ್ಕೆ ದಾರಿದೀಪವಾಗುವ ಅಪ್ಪನನ್ನು ಸಂಭ್ರಮಿಸುವ ದಿನ ಇದು.

ಎಲ್ಲಾ ಮಕ್ಕಳ ಪಾಲಿನ ರಿಯಲ್‌ ಹೀರೋ ತಂದೆ ಎಂದ್ರೆ ತಪ್ಪಾಗಲಾರದು. ತನ್ನ ಆಸೆ ಆಕಾಂಕ್ಷೆಗಳನ್ನು ಪಕ್ಕಕ್ಕಿಟ್ಟು, ತನ್ನ ಜವಬ್ದಾರಿಗಳನ್ನು ಪೂರೈಸುತ್ತಾ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ದುಡಿಯುವ ಶ್ರಮಜೀವಿ ಅಪ್ಪ, ತನ್ನ ಇಡೀ ಜೀವನವನ್ನೇ ಕುಟುಂಬಕ್ಕಾಗಿ ಮುಡಿಪಾಗಿಡುವ ತ್ಯಾಗಮಯಿ ಎಂದರೆ ಅದು ಅಪ್ಪ ಮಾತ್ರ.
ಆದ್ರೆ ತಾಯಿಯ ವಾತ್ಸಲ್ಯಕ್ಕೆ ಸಿಗುವ ಮನ್ನಣೆ ಅಪ್ಪನ ತ್ಯಾಗಕ್ಕೆ ಮಾತ್ರ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ಅಪ್ಪಂದಿರ ಪ್ರೀತಿ ಮತ್ತು ತ್ಯಾಗವನ್ನು ಸ್ಮರಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್‌ ಎರಡನೇ ಭಾನುವಾರದಂದು ವಿಶ್ವ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತದೆ.
ಪ್ರತಿ ವರ್ಷ ಮೇ ತಿಂಗಳ ಎರಡನೇ ಭಾನುವಾರದಂದು ವಿಶ್ವ ತಾಯಂದಿರ ದಿನವನ್ನು ಆಚರಿಸುವಂತೆ ಪ್ರತಿ ವರ್ಷ ಜೂನ್ ತಿಂಗಳ ಮೂರನೇ ಭಾನುವಾರದಂದು ತಂದೆಯ ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆ ಮೊದಲು ಅಮೆರಿಕದಲ್ಲಿ ಪ್ರಾರಂಭವಾಯಿತು. ತಂದೆಯ ದಿನವನ್ನು ಪ್ರಾರಂಭಿಸಿದ ಕೀರ್ತಿ ಅಮೆರಿಕದ ಸೋನೋರಾ ಸ್ಮಾರ್ಟ್ ಡಾಡ್ ಎಂಬ ಮಹಿಳೆಗೆ ಸಲ್ಲುತ್ತದೆ. ಅವರ ತಂದೆ ಸೈನಿಕರಾಗಿದ್ದರು, ಡಾಡ್ ಮತ್ತು ಅವರ ಐವರು ಒಡಹುಟ್ಟಿದವರ ತಾಯಿ ಹೆರಿಗೆಯ ಸಮಯದಲ್ಲಿ ಮರಣ ಹೊಂದಿದಾಗ ಅವರನ್ನು ತಂದೆಯೇ ಬೆಳೆಸಿದರು. ಹಾಗಾಗಿ ಡಾಡ್‌ 1909 ರಲ್ಲಿ ತಾಯಂದಿರ ದಿನದ ಸಂದರ್ಭದಲ್ಲಿ ತಾಯಂದಿರ ದಿನವನ್ನು ಆಚರಿಸುವಂತೆಯೇ, ತಂದೆಯ ದಿನವನ್ನು ಸಹ ಅದೇ ರೀತಿಯಲ್ಲಿ ಏಕೆ ಆಚರಿಸಬಾರದು ಎಂಬ ಕಲ್ಪನೆ ಅವರಲ್ಲಿ ಮೂಡಿತು. ನಂತರ ಸ್ಥಳೀಯ ಮುಖಂಡರು ಡಾಡ್ ಅವರ ಕಲ್ಪನೆಯನ್ನು ಬೆಂಬಲಿಸಿದರು. ಬಳಿಕ ಮೊದಲ ಬಾರಿಗೆ ತಂದೆಯಂದಿರ ದಿನವನ್ನು ಜೂನ್ 19, 1910 ರಂದು ಆಚರಿಸಲಾಯಿತು. ನಂತರ 1924 ರಲ್ಲಿ, ಯುಎಸ್ ಅಧ್ಯಕ್ಷ ಕ್ಯಾಲ್ವಿನ್ ಕೂಲಿಡ್ಜ್ ಕೂಡ ಇದಕ್ಕೆ ತಮ್ಮ ಬೆಂಬಲವನ್ನು ನೀಡಿದರು. 1966 ರಲ್ಲಿ, ಅಧ್ಯಕ್ಷ ಲಿಂಡನ್ ಬಿ. ಜಾನ್ಸನ್ ಈ ದಿನವನ್ನು ಗುರುತಿಸುವ ಘೋಷಣೆಯನ್ನು ಮಾಡಿದರು. 1972 ರಲ್ಲಿ ಆಗಿನ ಅಧ್ಯಕ್ಷ ರಿಚರ್ಡ್ ನಿಕ್ಸನ್ ಜೂನ್ ಎರಡನೇ ಭಾನುವಾರವನ್ನು ತಂದೆಯ ದಿನವೆಂದು ಗೊತ್ತುಪಡಿಸುವ ಕಾನೂನಿಗೆ ಸಹಿ ಹಾಕಿದರು. ಅಂದಿನಿಂದ ಪ್ರತಿವರ್ಷ ಈ ದಿನಾಚರಣೆಯನ್ನು ಆಚರಿಸಲಾಗುತ್ತದೆ.
ತಂದೆ ಮಕ್ಕಳ ಬೆನ್ನೆಲುಬು, ಮೊದಲ ಸ್ನೇಹಿತ ಕೂಡಾ ಹೌದು. ಮಕ್ಕಳಿಗೆ ಪ್ರತಿಯೊಂದು ವಿಷಯದಲ್ಲೂ ಬೆಂಬಲ ನೀಡುವವರು ಅದು ತಂದೆ. ತಾನು ನೋವುಂಡರು ಮಕ್ಕಳು ಮಾತ್ರ ಖುಷಿಯಾಗಿರಬೇಕೆಂದು ಬಯಸುವ ಜೀವವೆಂದರೆ ಅದು ಅಪ್ಪ. ಇಂತಹ ಹೀರೋಗಳಿಗೆ ಗೌರ ಸಲ್ಲಿಸಲೆಂದೇ ವಿಶ್ವ ತಂದೆಯಂದಿರ ದಿನವನ್ನು ಆಚರಿಸಲಾಗುತ್ತದೆ. ಇದು ತಂದೆಯಂದಿರ ತ್ಯಾಗ ಮತ್ತು ಪ್ರೀತಿಯನ್ನು ಎತ್ತಿ ಹಿಡಯುವ ದಿನವಾಗಿದೆ.
ಮುದ್ದಿನ ಅಪ್ಪನಿಗೆ ಉಡುಗೊರೆಗಳನ್ನು ನೀಡುವ ಮೂಲಕ ಅವರಿಷ್ಟದ ತಿನಿಸುಗಳನ್ನು ಮಾಡಿ ಬಡಿಸುವ ಮೂಲಕ ನೀವು ಈ ದಿನವನ್ನು ವಿಶೇಷವಾಗಿ ಆಚರಣೆ ಮಾಡಬಹುದು.

Gold Price: ಆಭರಣ ಪ್ರಿಯರಿಗೆ ಶಾಕ್; ದಾಖಲೆ ಬರೆದ ಚಿನ್ನದ ಬೆಲೆ

TAGGED:What is the importance of Father's Day?
Share This Article
Facebook Twitter Copy Link Print
Previous Article Gold Price: ಆಭರಣ ಪ್ರಿಯರಿಗೆ ಶಾಕ್; ದಾಖಲೆ ಬರೆದ ಚಿನ್ನದ ಬೆಲೆ
Next Article ಜಿಲ್ಲೆಯಾದ್ಯಂತ ಧಾರಾಕಾರ ಮಳೆ : ಬೆಳಗಾವಿ-ಗೋವಾ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?