newsics.com
ಬೆಂಗಳೂರು : ಜೈಲಿನಲ್ಲಿ ಇದ್ದರೂ ಕೂಡ ದರ್ಶನ್ ಅವರು ತಮ್ಮ ಫ್ಯಾನ್ಸ್ ಬಗ್ಗೆ ವಿಚಾರಿಸಿದ್ದಾರೆ. ಈ ಬಗ್ಗೆ ವಕೀಲರು ಮಾಹಿತಿ ನೀಡಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ವಕೀಲ ನಾರಾಯಣಸ್ವಾಮಿ ಅವರು ದರ್ಶನ್ ಹಾಗೂ ಪವಿತ್ರಾ ಗೌಡ ಅವರನ್ನು ಭೇಟಿ ಆಗಿದ್ದಾರೆ. ಆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ಕೆಲವು ವಿಚಾರ ತಿಳಿಸಿದ್ದಾರೆ.
ಜೈಲಿನಲ್ಲಿ ಇರುವ ದರ್ಶನ್ ಅವರು ಅಭಿಮಾನಿಗಳ ಬಗ್ಗೆ ವಿಚಾರಿಸುವುದನ್ನು ಮರೆತಿಲ್ಲ! ಅಭಿಮಾನಿಗಳು ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಎಂದು ದರ್ಶನ್ ಮನವಿ ಮಾಡಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.
ದರ್ಶನ್ ಮತ್ತು ಪವಿತ್ರಾ ಗೌಡ ಅವರನ್ನು ವಕೀಲರು ಪ್ರತ್ಯೇಕವಾಗಿ ಭೇಟಿ ಮಾಡಿದ್ದಾರೆ. ಜಾಮೀನು ಪ್ರಕ್ರಿಯೆಗಳ ಬಗ್ಗೆ ಮಾತುಕತೆ ಮಾಡಿರುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ, ಮುಂದಿನ ಕಾನೂನು ಹೋರಾಟದ ಸಾಧ್ಯತೆಗಳ ಬಗ್ಗೆಯೂ ಚರ್ಚೆ ಮಾಡಿದ್ದಾರೆ.