newsics.com
ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಮಾಡಲಾಗಿದೆ.
ಕಳೆದ 24 ಗಂಟೆಯಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗ್ತಿದ್ದು, ನಗರದ ಹಲವೆಡೆ ಇರುವ ತಗ್ಗು ಪ್ರದೇಶಗಳಲ್ಲಿ ನೆರೆಯ ಆತಂಕ ಎದುರಾಗಿದೆ. ಬೈಂದೂರು, ಕುಂದಾಪುರ ಭಾಗದಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ..
ನದಿಪಾತ್ರ ಹಾಗೂ ಸಮುದ್ರ ಪಾತ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಬೈಂದೂರು ಭಾಗದ ನದಿಪಾತ್ರದ ನಿವಾಸಿಗಳಲ್ಲಿ ಆತಂಕ ಎದುರಾಗಿದೆ.