newsics.com
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್ ಸವಾರನ ಮೇಲೆ ಬಿರುಗಾಳಿ ಮಳೆಗೆ ಮರ ಬಿದ್ದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಎನ್.ಆರ್. ಪುರ ಬಳಿ ಈ ಘಟನೆ ನಡೆದಿದೆ.
ಕಡಬಗೆರೆ ಬಳಿ ಬಿಳುಕೊಪ್ಪ ಗ್ರಾಮದ ಅನಿಲ್ (53) ಮೃತ ದುರ್ದೈವಿ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಶನಿವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯಲಾರಂಭಿಸಿದ್ದರೆ, ರವಿವಾರ ಬೆಳಗ್ಗೆಯಿಂದಲೇ ಮಳೆ ಆರ್ಭಟ ಜೋರಾಗಿದೆ. ಭಾರೀ ಮಳೆಗೆ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತವಾಗಿದ್ದರೇ, ಮರಗಳು, ವಿದ್ಯುತ್ ಕಂಬಗಳು ಧರಾಶಾಹಿಯಾಗುತ್ತಿವೆ. , ಜಿಲ್ಲಾಡಳಿತ ಅಲರ್ಟ್ ಘೋಷಿಸಿದೆ.