newsics.com
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಿದ್ದಾರೆ. ರಾಜ್ಯದಾದ್ಯಂತ ಮುಂಗಾರು ಮಳೆ ತನ್ನ ರೌದ್ರಾವತಾರವನ್ನು ಮುಂದುವರೆಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರಿಸುವ ಸೂಚನೆಯಿದ್ದು, ಜಿಲ್ಲಾಧಿಕಾರಿ ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಕುಮಟಾ,ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ,ಸಿದ್ದಾಪುರ, ಯಲ್ಲಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಇನ್ನು ಕೊಡಗಿನಲ್ಲೂ ಭಾರೀ ಮಳೆ ಹಿನ್ನೆಲೆ ಪ್ರೌಢ ಶಾಲೆವರೆಗೆ ರಜೆ ಘೋಷಿಸಲಾಗಿದೆ.
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭೂಕುಸಿತದ ಆತಂಕ ಇದ್ದು, ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ಈ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.