newsics.com
ರಾಮನಗರ: ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ ಬರುವಾಗ ಕನಕಪುರ ಮೂಲದ 18 ವರ್ಷದ ಅಯ್ಯಪ್ಪನ ಭಕ್ತನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಮೃತ ಯುವಕನನ್ನು ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಮೂಲತಃ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಸಿಯಾಗಿರುವ ಪ್ರಜ್ವಲ್ ಅವರು ತಮ್ಮ ತಂದೆ ಹಾಗೂ ಸ್ನೇಹಿತರ ಜೊತೆ ಶಬರಿಮಲೆ ಯಾತ್ರೆಗೆ ತೆರಳಿದ್ದರು.ಕಳೆದ ಎರಡು ದಿನಗಳ ಹಿಂದೆ ತಂದೆ ಹಾಗೂ ಸ್ನೇಹಿತರ ಜೊತೆ ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ.
ಶಬರಿಮಲೆ ದರ್ಶನ ಪೂರ್ಣಗೊಂಡ ಬಳಿಕ ವಾಪಸ್ಸು ಪ್ರಯಾಣದ ವೇಳೆ ಬೆಟ್ಟ ಇಳಿಯುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಪ್ರಜ್ವಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಘಾತಕಾರಿ ಬೆಳವಣಿಗೆಗೆ ಸ್ಥಳೀಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.