newsics.com
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ಐಪಿಎಲ್ ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದೇ ಖುಷಿಯಲ್ಲಿ ಆರ್ ಸಿಬಿ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಮಾಡಿದೆ. ಆದ್ರೆ, ಈ ಸಂಭ್ರಮಾಚರಣೆಯಲ್ಲಿ 11 ಆರ್ ಸಿಬಿ ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಇಂದು ಪಿಐಎಲ್ ವಿಚಾರಣೆ ನಡೆದಿದೆ.
ಘಟನೆ ಸಂಬಂಧ RCB, KSCA, DNA ಗೆ ಹೈಕೋರ್ಟ್ ನೋಟಿಸ್ ನೀಡಿದ್ದು, ವಿಚಾರಣೆ ಜೂ.23 ಕ್ಕೆ ಮಂದೂಡಿದೆ. ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಕೆ ಮಾಡಿದೆ. ಸರ್ಕಾರದ ವಾದ ಕೇಳಿದ ಬಳಿಕ ಮುಚ್ಚಿದ ಲಕೋಟೆ ಬಗ್ಗೆ ಹೈಕೋರ್ಟ್ ತೀರ್ಮಾನ ಕೈಗೊಳ್ಳಲಿದೆ.
ಘಟನೆ ಕುರಿತಂತೆ ಹೈಕೋರ್ಟ್ ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ಸರಿಯಾದ ತನಿಖೆ ನಡೆಸಬೇಕು ಅಲ್ಲದೇ ಸರಿಯಾದ ಪರಿಹಾರ ಕೊಡಬೇಕೆಂದು ಹೊಸ ಹೊಸ ಅರ್ಜಿಗಳು ಸಲ್ಲಿಕೆಯಾಗಿವೆ. ಹಾಗಾಗಿ ಪ್ರತಿವಾದಿಗಳನ್ನಾಗಿ RCB, KSCA, DNA ಗೆ ಹೈಕೋರ್ಟ್ ಸೂಚನೆ ನೀಡಿದೆ.