newsics.com
ಬೆಂಗಳೂರು: ನಾಳೆ ಪೂರ್ತಿ ದಿನ ಬೆಂಗಳೂರಲ್ಲಿ ಎಲ್ಲೂ ಕೂಡ ಕಾವೇರಿ ನೀರು ಸರಬರಾಜು ಇರುವುದಿಲ್ಲ. ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಬೆಳಗ್ಗೆ 6 ಗಂಟೆವರೆಗೂ ಕಾವೇರಿ ನೀರು ಸರಬರಾಜು ಸ್ಥಗಿತ ಮಾಡಲಾಗಿದೆ.
ಕಾವೇರಿ 5ನೇ ಹಂತದ ಕಾಮಗಾರಿ ಹಾಗೂ ವಿದ್ಯುತ್ ನಿರ್ವಹಣೆ ಕಾರಣದಿಂದಾಗಿ ಕಾವೇರಿ ನೀರು ಸರಬರಾಜು ಸ್ಥಗಿತ ಅನಿವಾರ್ಯವಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದ್ದು, ಮುಂಜಾಗ್ರತೆಯಾಗಿ ಕಾವೇರಿ ನೀರು ಸಂಗ್ರಹಿಸಿಕೊಳ್ಳುವಂತೆ ನಾಗರಿಕರಿಗೆ BWSSB ಮನವಿ ಮಾಡಿದೆ.
ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ಜೂನ್ 19ರ ಬೆಳಗ್ಗೆ 6 ರಿಂದ ಹಾಗೂ ಜೂ.20ರ ಬೆಳಗ್ಗೆ 6 ಗಂಟೆ ವರೆಗೆ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ- 5ರ ವರೆಗಿನ ಎಲ್ಲಾ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಇದರಿಂದ ಬಿಬಿಎಂಪಿ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಹೀಗಾಗಿ ಬೆಂಗಳೂರಿನ ನಾಗರಿಕರಿಗೆ, ವಾಣಿಜ್ಯ ಹಾಗೂ ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಜಲಮಂಡಳಿ ಸೂಚನೆ ನೀಡಿದೆ.
Vasthu Tips ಮನೆಯಲ್ಲಿ ಮನಿ ಪ್ಲಾಂಟ್ ಇದ್ಯಾ? ಈ ತಪ್ಪುಗಳನ್ನು ಮಾಡಲೇಬೇಡಿ, ಇದರಿಂದ ಬಡವರಾಗೋದು ಗ್ಯಾರಂಟಿ