newsics.com
ಬೆಂಗಳೂರು: ಕೆಲ ದಿನಗಳ ಹಿಂದೆ ಗಗನಕ್ಕೇರಿದ್ದ ಬಂಗಾರದ ಬೆಲೆ ಇಂದು ಕೊಂಚ ಇಳಿಕೆಯಾಗಿದೆ. ಚಿನ್ನದ ಬೆಲೆ ಗ್ರಾಮ್ಗೆ 50 ರೂನಷ್ಟು ಕಡಿಮೆಯಾಗಿದೆ. ಬೆಳ್ಳಿ ಬೆಲೆ ಇನ್ನೂ ಭರ್ಜರಿ ಇಳಿಕೆ ಕಂಡಿದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 9,265 ರೂನಿಂದ 9,210 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 10,048 ರೂಗೆ ಇಳಿದಿದೆ. ತಜ್ಞರೂ ಕೂಡ ಈ ಹಳದಿಲೋಹದ ಬೆಲೆ ಈ ವರ್ಷ ಶೇ. 30ರಷ್ಟು ಇಳಿಯಬಹುದು ಎಂದು ಅಂದಾಜಿಸಿದ್ದಾರೆ. ಬೆಳ್ಳಿ ಬೆಲೆ ಇವತ್ತು ಗ್ರಾಮ್ಗೆ ಬರೋಬ್ಬರಿ 2 ರೂ ತಗ್ಗಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 20ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,100 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,360 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,100 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ
Indian Money in Swiss Banks: ಸ್ವಿಸ್ ಬ್ಯಾಂಕ್ನಲ್ಲಿ ಭಾರತೀಯರ ಹಣ 3 ಪಟ್ಟು ಹೆಚ್ಚಳ; ವರದಿಯಲ್ಲಿ ಬಹಿರಂಗ