newsics.com
ಶಿಮ್ಲಾ: ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದರಿಂದ ಅನೇಕ ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದೆ. ಇನ್ನು ಮುಂದಿನ ನಾಲ್ಕು ದಿನ ಅನೇಕ ಸ್ಥಳಗಳಲ್ಲಿ ಭಾರೀ ಅಥವಾ ಅತಿ ಭಾರೀ ಮಳೆಯಾಗುವ ಬಗ್ಗೆ ಸ್ಥಳೀಯ ಹವಾಮಾನ ಕಚೇರಿ ಇಂದು ಆರೆಂಜ್ ಅಲರ್ಟ್ ನೀಡಿದೆ.
ಭೂಕುಸಿತದಿಂದಾಗಿ ಧರ್ಮಶಾಲಾ-ಚಟಾರೊ-ಗಗ್ಗಲ್ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ಸದ್ಯ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಭಾರೀ ಮಳೆಯಿಂದಾಗಿ ಪಾಂಡೋಹ್‌ನ ಶಾಹಿದ್ ಇಂದರ್ ಸಿಂಗ್ ಮಿಡಲ್ ಶಾಲೆಯಲ್ಲಿ ನೀರು ನಿಂತು, ಅವ್ಯವಸ್ಥೆ ಉಂಟಾಗಿದೆ.
ರಾಜ್ಯದ ಕೆಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಸುಂದರನಗರ, ಶಿಮ್ಲಾ ಮತ್ತು ಕಾಂಗ್ರಾದಲ್ಲಿ ಗುಡುಗು ಸಹಿತ ಮಳೆಯಾಗಿದೆ.