newsics.com
ನವದೆಹಲಿ: ಕ್ಲಾಸಿಕ್ ಟಿವಿ ಡ್ರಾಮಾಗಳಲ್ಲಿ ತಮ್ಮ ಐಕಾನಿಕ್ ಪಾತ್ರಗಳಿಂದ ಹೆಸರುವಾಸಿಯಾಗಿದ್ದ ಖ್ಯಾತ ಪಾಕಿಸ್ತಾನಿ ನಟಿ ಆಯೇಷಾ ಖಾನ್ ಬುಧವಾರ ಕರಾಚಿಯ ಗುಲ್ಶನ್-ಎ-ಇಕ್ಬಾಲ್ ಬ್ಲಾಕ್ 7 ರಲ್ಲಿರುವ ತಮ್ಮ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಖಾನ್ ನಿಧನರಾದ ಸುಮಾರು ಒಂದು ವಾರದ ನಂತರ ಅವರ ಮೃತದೇಹ ಪತ್ತೆಯಾಗಿದೆ. ನಟಿಯ ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಪೊಲೀಸ್ ಅಧಿಕಾರಿಗಳು ಮೃತದೇಹ ಕೊಳೆತ ಸ್ಥಿತಿಯಲ್ಲಿದೆ ಎಂದು ದೃಢಪಡಿಸಿದರು, ಇದು ಅವರು ಹಲವು ದಿನಗಳ ಹಿಂದೆಯೇ ಸಾವನ್ನಪ್ಪಿದ್ದಾರೆ ಎಂದು ಸೂಚಿಸಿದೆ.
ಹಲವಾರು ವರ್ಷಗಳಿಂದ ಒಂಟಿಯಾಗಿ ವಾಸಿಸುತ್ತಿದ್ದ ಖಾನ್, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಸಾರ್ವಜನಿಕವಾಗಿ ಅವರು ಎಲ್ಲಿಯೂ ಕಾಣಿಸಿಕೊಳ್ಳುತ್ತಿರಲಿಲ್ಲ ಎನ್ನಲಾಗಿದೆ.