newsics.com
ಸ್ಟಾರ್ ನಟ ಶಾರುಖ್ ಖಾನ್ ಅವರು ಹೊಸದಾಗಿ ನಿರ್ಮಾಣ ಹಂತದಲ್ಲಿರೋ ಮನ್ನತ್ ಬಂಗಲೆಯನ್ನು ಬಿಟ್ಟು ಪತ್ನಿ ಮತ್ತು ಮಕ್ಕಳೊಂದಿಗೆ ಬೇರೆಡೆಗೆ ಸ್ಥಳಾಂತರಗೊಂಡಿದ್ದರು. ಆದ್ರೆ, ಈ ಮಧ್ಯೆ ಮುಂಬೈನಲ್ಲಿರೋ ನಟ ಶಾರುಖ್ ಖಾನ್ ಅವರ ಮನ್ನತ್ ಮನೆಗೆ ಬಿಎಂಸಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮನ್ನತ್ ಮನೆಯಲ್ಲಿ ಅಕ್ರಮ ಚಟುವಟಿಕೆಯಲ್ಲಿ ಕಾಮಗಾರಿ ನಿರ್ಮಾಣ ಆಗುತ್ತೆ ಅಂತ ಕಾರ್ಯಕರ್ತ ಸಂತೋಷ್ ದೌಂಡ್ಕರ್ ದೂರು ದಾಖಲಿಸಿದ್ದರು. ಕಾರ್ಯಕರ್ತರು ನೀಡಿದ ದೂರಿನ ಆಧಾರದ ಮೇರೆಗೆ ಮನ್ನತ್ ಮನೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಬಿಎಂಸಿ ಸದಸ್ಯರು ತನಿಖಾ ತಂಡದರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಎಲ್ಲಾ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದೆ.
ಶಾರುಖ್ ಖಾನ್ ನಿವಾಸದ ಮೇಲೆ ಬಂದ ಆರೋಪದ ಬಗ್ಗೆ ಅವರ ಮ್ಯಾನೇಜರ್ ಪೂಜಾ ದದ್ಲಾನಿ ಪ್ರತಿಕ್ರಿಯೆ ನೀಡಿದ್ದಾರೆ. ಇಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿಲ್ಲ. ಎಲ್ಲಾ ಕೆಲಸಗಳು ಮಾರ್ಗಸೂಚಿಗಳ ಪ್ರಕಾರ ನಡೆಯುತ್ತಿವೆ ಎಂದು ಸ್ಪಷ್ಟಪಡಿಸಿದ್ದಾರೆ.