newsics.com
ಬೆಂಗಳೂರು: ಗೌವ್ಹಾಟಿ-ಚೆನ್ನೈ ಇಂಡಿಗೋ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ವರ್ಶ ಮಾಡಿದ ಘಟನೆ ನಡೆದಿದೆ. ಗೌವ್ಹಾಟಿಯಿಂದ ಹೊರಟ ವಿಮಾನ ಕೆಲ ಹೊತ್ತಿನ ಬಳಿಕ ಪೈಲೆಟ್ ಅಪಾಯದ ಸೂಚನೆ ನೀಡಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಮೇಡೇ ಮೇಡೇ ಸಂದೇಶ ರವಾನಿಸಿದ್ದಾರೆ. ಕಂಟ್ರೋಲ್ ರೂಂ ಅಧಿಕಾರಿಗಳು ವಿಮಾನವನ್ನು ಬೆಂಗಳೂರಿಗೆ ಡೈವರ್ಟ್ ಮಾಡಲು ಸೂಚಿಸಿದ್ದಾರೆ. ಇದರಂತೆ ಬೆಂಗಳೂರಿನಲ್ಲಿ ವಿಮಾನ ತುರ್ತು ಭೂಸ್ವರ್ಶ ಮಾಡಿದೆ.
ಇಂಡಿಗೋ ವಿಮಾನದಲ್ಲಿ 168 ಮಂದಿ ಪ್ರಯಾಣಿಕರಿದ್ದರು. ವಿಮಾನದಲ್ಲಿ ಪ್ರಯಾಣಿಕರು ಆತಂಕದಿಂದ ಸೀಟು ತುದಿಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿತ್ತು. ಇಂಧನ ಕೊರತೆಯಾಗುತ್ತಿದ್ದಂತೆ, ಪೈಲಟ್ ಎರಡನೇ ಆಲೋಚನೆ ಮಾಡದೇ, ಎಮರ್ಜೆನ್ಸಿ ಲ್ಯಾಂಡಿಂಗ್‌ಗೆ ನಿರ್ಧಾರ ಮಾಡಿದ್ದರು. ತಕ್ಷಣ ಬೆಂಗಳೂರು ಎಟಿಸಿಯಿಂದ ವಿಮಾನದ ಎಮರ್ಜೆನ್ಸಿ ಲ್ಯಾಂಡಿಂಗ್ ಗೆ ಗ್ರೌಂಡ್ ಸ್ಟಾಪ್ಗೆ ಸೂಚನೆಯನ್ನು ನೀಡಲಾಗಿತ್ತು.
ಅಗ್ನಿಶಾಮಕ ದಳದ ಸಿಬ್ಬಂದಿ, ಮೆಡಿಕಲ್ ಸಿಬ್ಬಂದಿ ಗ್ರೌಂಡ್ ನಲ್ಲಿ ರೆಡಿಯಾಗಿದ್ದರು. ರಾತ್ರಿ 8.20 ಕ್ಕೆ ಬೆಂಗಳೂರಿನ ಕೆಂಪೇಗೌಡ ಇಂಟರ್ ನ್ಯಾಷನಲ್ ಏರ್ ಪೋರ್ಟ್ ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಿತ್ತು. ವಿಮಾನಕ್ಕೆ ಇಂಧನ ಭರ್ತಿ ಮಾಡಿಸಿಕೊಂಡು ರಾತ್ರಿ ಚೆನ್ನೈಗೆ ಪ್ರಯಾಣ ಬೆಳೆಸಿದ್ದ ಇಂಡಿಗೋ ವಿಮಾನ ರಾತ್ರಿ 11.25 ರಲ್ಲಿ ಚೆನ್ನೈನಲ್ಲಿ ಸೇಫ್ ಲ್ಯಾಂಡಿಂಗ್ ಮಾಡಿತ್ತು.