ತಿರುವನಂತಪುರಂ: ಕೇರಳದ ಮಾಜಿ ಸಿಎಂ ಹಾಗೂ ಸಿಪಿಐ(ಎಂ) ಮುಖಂಡ ವಿ.ಎಸ್. ಅಚ್ಚುತಾನಂದ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಚ್ಯುತಾನಂದನ್ ಅವರ ಆರೋಗ್ಯ ವಿಚಾರಿಸಿದರು. ಹಿರಿಯ ನಾಯಕನ ಆರೋಗ್ಯ ಕುರಿತು ಹೃದ್ರೋಗ ತಜ್ಞರ ತಂಡ ನಿಗಾ ವಹಿಸಿದೆ ಎಂದು ವರದಿಗಾರರಿಗೆ ತಿಳಿಸಿದ್ದಾರೆ.
ಕೇರಳದ ರಾಜಕೀಯದಲ್ಲಿ ಮೇರು ವ್ಯಕ್ತಿಯಾದ ಅಚ್ಯುತಾನಂದನ್ ಅವರು ಕಳೆದ ಕೆಲ ವರ್ಷಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.