newsics.com
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮೈಲಸಂದ್ರದಲ್ಲಿ ಹಾಡಹಗಲೇ ಗಾಂಜಾ ಮತ್ತಲ್ಲಿ ಇದಂತಹ ಐದರಿಂದ ಆರು ಜನರ ಪುಂಡರು ಯುವತಿಗೆ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ತಾಲೂಕಿನ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಮೈಲಸಂದ್ರ ಬಳಿ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಘಟನೆ ನಡೆದಿದೆ. ಬಂಧಿತರನ್ನು ರಿಚರ್ಡ್ (24) ಅಂಥೋನಿ (52) ಎಂದು ಗುರುತಿಸಲಾಗಿದೆ.
ಯುವತಿ ಮನೆಗೆ ದಿನಸಿ ತರಲು ಅಂಗಡಿಗೆ ಹೊರಟಿದ್ದರು. ಈ ವೇಳೆ ಗಾಂಜಾ ಮತ್ತಿನಲ್ಲಿದ್ದ ಪುಂಡರು ಆಕೆಯನ್ನು ಅಡ್ಡಗಟ್ಟಿ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ, ಇದಕ್ಕೆ ಯುವತಿ ಪ್ರತಿರೋಧ ವ್ಯಕ್ತಪಡಿಸಿದಾಗ ಆಕೆಯ ಮೇಲೆ ಹಲ್ಲೆ ಯತ್ನ ನಡೆಸಿದ್ದಾರೆ. ಈ ಸಂಬಂಧ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿಗಳು ಯುವತಿ ನೆರವಿಗೆ ಬಂದ ಸ್ಥಳೀಯರ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
https://www.instagram.com/reel/DLP4ViPxeVB/?igsh=MWJ0NnljZW8xazdwOA==