newsics.com
ಉಡುಪಿ:ಶಾಲಾ-ಕಾಲೇಜುಗಳು, ಆಸ್ಪತ್ರೆಗಳಿಗೆ ನಿರಂತರ ಬಾಂಬ್ ಬೆದರಿಕೆ ಸಂದೇಶಗಳನ್ನು ಇ-ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ಚೈನ್ನೈ ಮೂಲದ ರೀನಾ ಜೊಶಿಲ್ಡ ಆಗಿದ್ದು,ಇಂಜಿನಿಯರಿಂಗ್ ಅಧ್ಯಯನ ಮಾಡಿ ಚೆನ್ನೈಯಲ್ಲಿ ಎಂಜಿನಿಯರ್ ಆಗಿದ್ದ ರೀನಾ ಜೊಶಿಲ್ಡ, ಹುಸಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದಳು.
ಜೂನ್ 16ರಂದು ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತುನಿಮ್ಮ ಶಾಲೆಯಲ್ಲಿ ಬಾಂಬ್ ಸ್ಫೋಟಿಸಿದರೆ ಮಕ್ಕಳು ಸಾಯುತ್ತಾರೆ. ಮಕ್ಕಳು ಸತ್ತರೆ ಮಾತ್ರ ಪೋಷಕರು ಪ್ರತಿಭಟನೆ ಮಾಡುತ್ತಾರೆ. ಪೊಲೀಸರು ಸರಿಯಾದ ತನಿಖೆ ನಡೆಸಿ ಹೈದರಾಬಾದಿನ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸುತ್ತಾರೆ’ ಎಂದು ಇ-ಮೇಲ್ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಆರೋಪಿ ಇದೇ ರೀತಿಯ ಇ-ಮೇಲ್ ಸಂದೇಶ ಕಳುಹಿಸಿದ್ದಳು. ಶಾಲೆಗಳು, ಆಸ್ಪತ್ರೆಗಳು ಮತ್ತು ಕ್ರೀಡಾಂಗಣಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಳು.