newsics.com
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬೃಹತ್ ಹಣಕಾಸಿನ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಅವರನ್ನು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಎರಡು ದಿನಗಳ ಸತತ ವಿಚಾರಣೆಯ ಬಳಿಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದರು. ಇನ್ನೋರ್ವ ಆರೋಪಿ ಶಾಸಕ ದದ್ದಲ್ ಕೂಡ ಇಡಿ ವಶವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಎಸ್ಐಟಿ ಅಧಿಕಾರಿಗಳ ತನಿಖೆಯಿಂದ ಸುರಕ್ಷಿತವಾಗಿದ್ದ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ.
ಕೆಲವೇ ಗಂಟೆಯಲ್ಲಿ ಬಂಧನ ಪ್ರಕ್ರಿಯೆ ಮಾಡುವ ಸಾಧ್ಯತೆ ಇದೆ. ಸೂಕ್ತ ಸಾಕ್ಷಿಗಳ ಸಮೇತ ನಾಗೇಂದ್ರ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿದೆ ಎಂಬ ಆರೋಪ ಇದೆ. ಅದರಲ್ಲಿ 89 ಕೋಟಿ ಹಣ ನಾಗೇಂದ್ರ ಅಂಡ್ ಟೀಂ ಸೇರಿದೆ ಎಂಬ ಆಪಾದನೆ ಕೇಳಿಬಂದಿದೆ.