Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂದೇ ಅಂಬಾನಿ ಮದುವೆ: ಅನಂತ್- ರಾಧಿಕಾ ವಿವಾಹಕ್ಕೆ ಎನ್‌ಎಸ್‌ಜಿ ಕಮಾಂಡೋ ಭದ್ರತೆ, ಸಂಚಾರಕ್ಕೆ 100 ಖಾಸಗಿ‌ ವಿಮಾನ
ದೇಶಪ್ರಮುಖ

ಇಂದೇ ಅಂಬಾನಿ ಮದುವೆ: ಅನಂತ್- ರಾಧಿಕಾ ವಿವಾಹಕ್ಕೆ ಎನ್‌ಎಸ್‌ಜಿ ಕಮಾಂಡೋ ಭದ್ರತೆ, ಸಂಚಾರಕ್ಕೆ 100 ಖಾಸಗಿ‌ ವಿಮಾನ

Share
2 Min Read
SHARE

newsics.com

ಮುಂಬೈ: ಭಾರತದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹಕ್ಕೆ ಮುಂಬೈ‌ ಮಹಾನಗರಿ ಸಾಕ್ಷಿಯಾಗಲಿದೆ.

ಇಂದು (ಜುಲೈ 12) ಶುಕ್ರವಾರ ಅನಂತ- ರಾಧಿಕಾ ಸಪ್ತಪದಿ ತುಳಿಯಲಿದ್ದಾರೆ. ‘ಆಂಟಿಲಿಯಾ’ ನಿವಾಸ ಮದುವೆ ಸಮಾರಂಭಕ್ಕಾಗಿ ವಧುವಿನಂತೆ ಅಲಂಕೃತಗೊಂಡಿದೆ.

ದೇಶವಲ್ಲದೇ, ವಿದೇಶದಲ್ಲೂ ಭಾರೀ ಸದ್ದು ಮಾಡುತ್ತಿರುವ ಈ ವಿವಾಹದ ಕೆಲ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಮದುವೆಗೆ ಬರುವ ಅತಿಥಿಗಳಿಗೆ ಭೂರಿ ಭೋಜನ ಉಣಬಡಿಸಲು ಅಂಬಾನಿ ಕುಟುಂಬ ಸಿದ್ಧತೆ ಮಾಡಿಕೊಂಡಿದೆ.

ವಿವಾಹದ ಬಳಿಕ ಜುಲೈ 13 ರಂದು ಆಶೀರ್ವಾದ ಸಮಾರಂಭ, ಜುಲೈ 14 ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜುಲೈ 12 ರಂದು ಮಧ್ಯಾಹ್ನ 3 ಗಂಟೆಯವರೆಗೆ ಮದುವೆ ಮನೆಗೆ ಜನರು ಆಗಮಿಸಲಿದ್ದಾರೆ. ರಾತ್ರಿ 8 ಗಂಟೆಗೆ ವರ್ಮಾ ಸಮಾರಂಭ, ರಾತ್ರಿ 9.30ಕ್ಕೆ ಮದುವೆ ಕಾರ್ಯಕ್ರಮ ನಡೆಯಲಿದೆ. ಅತಿಥಿಗಳಿಗೆ ಸಾಂಪ್ರದಾಯಿಕ ಡ್ರೆಸ್ಕೋಡ್ ಕೂಡ ನಿಗದಿ ಮಾಡಲಾಗಿದೆ.

ಅನಂತ್ ಅಂಬಾನಿ ಮದುವೆಯಲ್ಲಿ ಉತ್ತರಪ್ರದೇಶದ ಪ್ರಸಿದ್ಧ ‘ಬನಾರಸಿ ಚಾಟ್’ ಗಣ್ಯರಿಗೆ ಉಣ ಬಡಿಸಲಾಗುತ್ತಿದೆ. ಇದನ್ನು ಬನಾರಸ್‌ನಲ್ಲಿರುವ ಪ್ರಸಿದ್ಧ ಅಂಗಡಿ ‘ಕಾಶಿ ಚಾಟ್ ಭಂಡಾರ್’ನಿಂದ ತಯಾರಿಸಲಾಗಿದೆ. ಕೆಲ ದಿನಗಳ ಹಿಂದೆ ನೀತಾ ಅಂಬಾನಿ ಅವರು ಕಾಶಿ ಭಂಡಾರ್‌ಗೆ ತೆರಳಿ, ಮಾತುಕತೆ ನಡೆಸಿದ್ದರು.

ವಿವಾಹ ಸಮಾರಂಭಕ್ಕೆ ದೇಶ-ವಿದೇಶಗಳಿಂದ ಬರುವ ಗಣ್ಯರಿಗಾಗಿ 100 ಕ್ಕೂ ಹೆಚ್ಚು ಖಾಸಗಿ ಜೆಟ್‌ಗಳನ್ನು ಮೀಸಲಿಡಲಾಗಿದೆ. ಜೆಟ್ ಇಳಿದ ನಂತರ, ಅಲ್ಲಿಂದ ವಿವಾಹ ಸಮಾರಂಭದ ಸ್ಥಳಕ್ಕೆ ತಲುಪಲು ಐಷಾರಾಮಿ ಕಾರುಗಳು ಸಿದ್ಧವಾಗಿವೆ.

ವಿವಾಹ ಸಮಾರಂಭಕ್ಕೆ ಸಿನಿಮಾ ತಾರೆಯರು, ಗಣ್ಯರು, ವಿವಿಧ ರಾಜಕೀಯ ನಾಯಕರನ್ನು ಆಹ್ವಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಗಮಿಸಲಿದ್ದಾರೆ.

ಬ್ರಿಟನ್‌ನ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್, ಟೋನಿ ಬ್ಲೇರ್, ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ, ಕೆನಡಾದ ಮಾಜಿ ಪ್ರಧಾನಿ ಸ್ಟೀಫನ್ ಹಾರ್ಪರ್ ಸೇರಿದಂತೆ ವಿವಿಧ ನಾಯಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಮದುವೆಗೆ ಆಗಮಿಸುವವರ ಭದ್ರತೆಗೆ ಎನ್ಎಸ್ಜಿ ಕಮಾಂಡೋಗಳನ್ನು ನಿಯೋಜಿಸಲಾಗಿದೆ. ಸುಮಾರು 2,500 ವಿವಿಧ ಖಾದ್ಯಗಳನ್ನು ಅತಿಥಿಗಳಿಗೆ ಉಣಬಡಿಸಲಾಗುತ್ತಿದೆ.

10 ಅಂತಾರಾಷ್ಟ್ರೀಯ ಬಾಣಸಿಗರು ಅಡುಗೆ ತಯಾರಿಸಲಿದ್ದಾರೆ. ಅತಿಥಿಗಳಿಗೆ ಕೋಟ್ಯಂತರ ಮೌಲ್ಯದ ವಾಚ್‌ಗಳನ್ನು ಉಡುಗೊರೆಯಾಗಿ ನೀಡಲಾಗುತ್ತಿದೆ. ಇಂಟಿಗ್ರೇಟೆಡ್ ಸೆಕ್ಯುರಿಟಿ ಆಪರೇಟಿಂಗ್ ಸಿಸ್ಟಮ್‌ನ್ನೂ ಅಳವಡಿಸಲಾಗಿದೆ.

ಮಾತಿನ ಮಂಟಪ ಕಟ್ಟುತ್ತಿದ್ದ ಶುದ್ಧ ಕನ್ನಡತಿ… ಅಪರ್ಣಾ ಮೆಲುಮಾತು ಕರ್ಣಾನಂದ…

ಭೂಕುಸಿತ: ನದಿಗುರುಳಿದ 2 ಬಸ್, 63 ಪ್ರಯಾಣಿಕರು ನಾಪತ್ತೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

TAGGED:100 private planes for trafficAmbani wedding today: NSG commando security for Ananth-Radhika wedding
Share This Article
Facebook Twitter Copy Link Print
Previous Article ಮಾತಿನ ಮಂಟಪ ಕಟ್ಟುತ್ತಿದ್ದ ಶುದ್ಧ ಕನ್ನಡತಿ… ಅಪರ್ಣಾ ಮೆಲುಮಾತು ಕರ್ಣಾನಂದ…
Next Article ಅಪರ್ಣಾಗೆ ವಾಯ್ಸ್ ಅನೌನ್ಸ್ ಮೂಲಕ ನಮ್ಮ‌ ಮೆಟ್ರೋ ಶ್ರದ್ಧಾಂಜಲಿ, ಎಂದೆಂದಿಗೂ ನಿಮ್ಮ ಧ್ವನಿ ಜೀವಂತ…

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?