newsics.com
ರಾಜ್ಯದಲ್ಲಿ ಇಂದೂ ಸಹ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ 48 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ,ಚಿಕ್ಕಮಗಳೂರಿನ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಶಾಲೆ-ಅಂಗನವಾಡಿ ಕೇಂದ್ರಗಳಿಗೆ ಸ್ಥಳೀಯ ಆಡಳಿತ ರಜೆ ಘೋಷಣೆ ಮಾಡಿದೆ.
ಕರಾವಳಿ ಭಾಗದಲ್ಲಿ ದಾಖಲೆಯ ಮಳೆಯಾಗ್ತಿದೆ. ದಕ್ಷಿಣ ಕನ್ನಡ, ಉಡುಪಿ, ಮಂಗಳೂರಿನಲ್ಲೂ ಮಳೆಯ ಆರ್ಭಟ ಜೋರಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ,NR ಪುರ ತಾಲೂಕಿನಲ್ಲಿ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಇದೀಗ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರಗೆ ಕೊಕ್?; ವಿಪಕ್ಷ ನಾಯಕನ ಬದಲಾವಣೆಯಾಗುತ್ತಾ?