newsics.com
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಹಿಳೆಯೊಬ್ಬರು ಪದ್ಮಶ್ರೀ ಪ್ರಶಸ್ತ ಪುರಸ್ಕೃತ ಸನ್ಯಾಸಿ ಕಾರ್ತಿಕ್ ಮಹಾರಾಜ್ ಅತ್ಯಾಚಾರ ಆರೋಪ ಮಾಡಿದ್ದಾರೆ. 2013 ರಲ್ಲಿ ಶಾಲೆಯಲ್ಲಿ ಕೆಲಸ ನೀಡುವ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ಆಕೆ ಹೇಳಿದ್ದಾಳೆ.
ಭಾರತ್ ಸೇವಾಶ್ರಮ ಸಂಘದ ಸನ್ಯಾಸಿ ಮಹಾರಾಜ್ ಅವರು ಮುರ್ಷಿದಾಬಾದ್‌ನಲ್ಲಿರುವ ಆಶ್ರಮಕ್ಕೆ ತನ್ನನ್ನು ಕರೆದೊಯ್ದು, ಅದರ ಆವರಣದಲ್ಲಿರುವ ಶಾಲೆಯಲ್ಲಿ ಬೋಧನಾ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು ಮತ್ತು ಆಶ್ರಮದಲ್ಲಿ ವಸತಿಯನ್ನೂ ನೀಡಿದ್ದರು ಎಂದು ಮಹಿಳೆ ಹೇಳಿದ್ದಾಳೆ.
ಆದರೆ, ಒಂದು ರಾತ್ರಿ ಕಾರ್ತಿಕ್ ಮಹಾರಾಜ್ ಅವರು ತನ್ನ ಕೋಣೆಗೆ ನುಗ್ಗಿ ತನ್ನ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾರೆ. 2013ರ ಜನವರಿ-ಜೂನ್ ನಡುವೆ ಒಟ್ಟು 12 ಬಾರಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಆಕೆ ತನ್ನ ಹೇಳಿಕೆಯಲ್ಲಿ ಹೇಳಿದಳು.
ಭಯ ಮತ್ತು ಅಸಹಾಯಕತೆಯಿಂದ ಇಷ್ಟು ವರ್ಷಗಳ ಕಾಲ ತಾನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಪೊಲೀಸರನ್ನು ಸಂಪರ್ಕಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸನ್ಯಾಸಿ ಬೆದರಿಕೆ ಹಾಕಿದ್ದರು ಎಂದು ಮಹಿಳೆ ತನ್ನ ದೂರಿನಲ್ಲಿ ಹೇಳಿದ್ದಾಳೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಕಾರ್ತಿಕ್ ಮಹಾರಾಜ್ ವಿರುದ್ಧ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದೃಢಪಡಿಸಿವೆ. ಪ್ರಸ್ತುತ ತನಿಖೆ ನಡೆಯುತ್ತಿದೆ.
ಈ ವರ್ಷ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಮಹಾರಾಜ್, ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ. , ಯಾವುದೇ ತಪ್ಪು ಮಾಡಿಲ್ಲ ಇದೊಂದು ಸುಳ್ಳು ಆರೋಪ ಎಂದು ಅವರು ಹೇಳಿದರು. ನಾನು ಸನ್ಯಾಸಿ. ಸನ್ಯಾಸಿಯ ಜೀವನದಲ್ಲಿ ಇಂತಹ ಅಡೆತಡೆಗಳು ಅಸಾಮಾನ್ಯವಲ್ಲ. ತಮ್ಮ ನೂನು ತಂಡವು ನ್ಯಾಯಾಲಯದಲ್ಲಿ ಈ ವಿಷಯಕ್ಕೆ ಪ್ರತಿಕ್ರಿಯಿಸುತ್ತದೆ ಎಂದು ಮಹಾರಾಜ್ ಹೇಳಿದರು.
ಈ ಹಿಂದೆ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಮಹಾರಾಜ್ ಮೇಲೆ ರಾಜಕೀಯ ಆರೋಪವನ್ನು ಮಾಡಿದ್ದರು. ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಸಹಾಯ ಮಾಡುತ್ತಿದ್ದಾರೆ ಮತ್ತು ತೃಣಮೂಲ ಕಾಂಗ್ರೆಸ್ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ತಮ್ಮ ಆಶ್ರಮದ ಪ್ರತಿಷ್ಠೆಗೆ ಕಳಂಕ ತಂದಿದ್ದಕ್ಕಾಗಿ ಬ್ಯಾನರ್ಜಿ ಅವರಿಂದ ಬೇಷರತ್ತಾದ ಕ್ಷಮೆಯಾಚನೆಯನ್ನು ಕೋರಿ ಮಹಾರಾಜ್ 2024 ರಲ್ಲಿ ಕಾನೂನು ನೋಟಿಸ್ ಕಳುಹಿಸಿದ್ದರು.
10 ನಿಮಿಷಗಳ ಅಪ್ಪುಗೆಗೆ 1200 ರೂ.; ಇಲ್ಲಿ ಯುವತಿಯರು ಯುವಕರನ್ನ ಅಪ್ಪಿಕೊಂಡು ಹಣ ಗಳಿಸ್ತಾರೆ