newsics.com
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಸರಣಿ ಮುಂದುವರಿದಿದೆ.
ರಜೆಗೆಂದು ಊರಿಗೆ ಬಂದಿದ್ದ ದೇಶದ ಗಡಿ ಕಾಯುವ ಯೋಧ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಮೃತ ಯೋಧ.
18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೋಹಿತ್ ರಜೆಗೆಂದು ಊರಿಗೆ ತೆರಳಿದ್ದಾಗ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ.
ಜೂ.28ರಂದು ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಜಮೀನನ್ನು ಉಳುಮೆ ಮಾಡುವ ವೇಳೆ ಹೃದಯಾಘಾತವಾಗಿತ್ತು. ಆಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಹಿನ್ನೆಲೆಯಲ್ಲಿ ಲೋಹಿತ್ ಅವರಿಗೆ ಸಣ್ಣಪುಟ್ಟ ಗಾಯಗಳೂ ಆಗಿದ್ದವು.
ತಕ್ಷಣ ಸ್ಥಳೀಯರು ಲೋಹಿತ್ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಲೋಹಿತ್ ಆಸ್ಪತ್ರೆಯಲ್ಲೇ ಅಸುನೀಗಿದ್ದಾರೆ.
Warren Buffett 51,000 ಕೋಟಿ ಮೌಲ್ಯದ ಷೇರುಗಳ ದಾನಕ್ಕೆ ಮುಂದಾದ ಮಹಾನ್ ಉದ್ಯಮಿ!