Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅರಸು ಟ್ರಕ್ ಟರ್ಮಿನಲ್ ನಿಗಮದಲ್ಲಿ ಹಣ ದುರ್ಬಳಕೆ ಆರೋಪ: ಬಿಜೆಪಿ ಮಾಜಿ ಎಂಎಲ್‌ಸಿ ವೀರಯ್ಯ ಬಂಧನ
ಕರ್ನಾಟಕಪ್ರಮುಖ

ಅರಸು ಟ್ರಕ್ ಟರ್ಮಿನಲ್ ನಿಗಮದಲ್ಲಿ ಹಣ ದುರ್ಬಳಕೆ ಆರೋಪ: ಬಿಜೆಪಿ ಮಾಜಿ ಎಂಎಲ್‌ಸಿ ವೀರಯ್ಯ ಬಂಧನ

Share
2 Min Read
SHARE

newsics.com
ಬೆಂಗಳೂರು: ಸರ್ಕಾರದ ಸಂಸ್ಥೆಯಾಗಿರುವ ಡಿ ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿಮಿಟೆಡ್ (DDUTTL) ನಿಗಮದಲ್ಲಿ 47.10 ಕೋಟಿ ರೂಪಾಯಿಗಳ ದುರ್ಬಳಕೆ ಮಾಡಿಕೊಂಡ ಆರೋಪ ಪ್ರಕರಣದಲ್ಲಿ ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ರದ್ದಾಗುತ್ತಿದ್ದಂತೆ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳು ವೀರಯ್ಯ ಅವರನ್ನು ಶುಕ್ರವಾರ ಮೈಸೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ.

ಮೂರು ವರ್ಷಗಳ ಹಿಂದೆ ಈ ಅವ್ಯವಹಾರ ನಡೆದಿದ್ದು, ಆಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿಎಸ್ ವೀರಯ್ಯ ಅವರು ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿಮಿಟೆಡ್ (ಡಿಡಿಯುಟಿಟಿಎಲ್) ನಿಗಮ ಅಧ್ಯಕ್ಷರಾಗಿದ್ದರು. 47.1 ಕೋಟಿ ರೂಪಾಯಿಗಳ ಅವ್ಯವಹಾರದಲ್ಲಿ ವೀರಯ್ಯ ಅವರ ನೇರಪಾತ್ರವನ್ನು ಸಿಐಡಿ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ.

ಶುಕ್ರವಾರ (ಜುಲೈ 12) ಬೆಂಗಳೂರು ಕೋರ್ಟ್ ವೀರಯ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿತು. ಕೂಡಲೇ ಅಧಿಕಾರಿಗಳು ವೀರಯ್ಯ ಅವರನ್ನು ವಶಕ್ಕೆ ಪಡೆದಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಎಸ್. ಶಂಕರಪ್ಪ ಅವರನ್ನು ಇದೇ ಪ್ರಕರಣದಲ್ಲಿ ಸಿಬಿಐ ಬಂಧಿಸಿತ್ತು. ಅಕ್ರಮ ನಡೆದಾಗ ಶಂಕರಪ್ಪ ಡಿಡಿಯುಟಿಟಿಎಲ್‌ನಲ್ಲಿ ಉಪ ನಿರ್ದೇಶಕರಾಗಿದ್ದರು. ಇವರ ಬಂಧನವಾಗುತ್ತಿದ್ದಂತೆ ಎಚ್ಚೆತ್ತ ವೀರಯ್ಯ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಟೆಂಡರ್ ಕರೆಯದೆ 2 ಕೋಟಿ ರೂಪಾಯಿಗಳ ವರೆಗಿನ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ನೀಡಿರುವ ಆರೋಪಗಳಿವೆ. ಒಟ್ಟಾರೆಯಾಗಿ 47.1 ಕೋಟಿ ರೂಪಾಯಿಗಳ ಕಾಮಗಾರಿಯ ಅವ್ಯವಹಾರ ನಡೆದಿದೆ ಎಂಬುದು ಸಿಐಡಿ ಅಧಿಕಾರಿಗಳ ವಾದವಾಗಿದೆ.

ಟ್ರಕ್ ಟರ್ಮಿನಲ್‌ಗಳ ನವೀಕರಣ ಹಾಗೂ ನಿರ್ವಹಣೆ ಕಾಮಗಾರಿ ನಡೆಸದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ 47 ಕೋಟಿ 10 ಲಕ್ಷ ರೂಪಾಯಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಡಿಎಸ್ ವೀರಯ್ಯ ಮತ್ತು ಎಸ್. ಶಂಕರಪ್ಪ ಅಕ್ರಮವಾಗಿ ತಮ್ಮ ಖಾತೆಗಳಿಗೆ ಹಣ ರವಾನಿಸಿಕೊಂಡಿರುವುದು ಪತ್ತೆಯಾಗಿದೆ.
ಸಿಐಡಿ ಈವರೆಗೆ 765 ಕಡತಗಳನ್ನು ಸಂಗ್ರಹಿಸಿದೆ. 380 ಬ್ಯಾಂಕ್ ಖಾತೆಗಳಿಗೆ ಲಿಂಕ್ ಮಾಡಲಾದ 450 ಪುಟಗಳ ಡೇಟಾವನ್ನು ವಿಶ್ಲೇಷಣೆ ಬಳಿಕ ಅಕ್ರಮ ನಡೆದಿರುವುದನ್ನು ಪತ್ತೆಹಚ್ಚಲಾಗಿದೆ. ಡಿಡಿಯುಟಿಟಿಎಲ್‌ನಲ್ಲಿ ಸಿಎನ್ ಶಿವಪ್ರಕಾಶ್ ಅವರು ಉಪ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿತ್ತು. ಇವರು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರ ವಿಚಾರಣೆ ಬಳಿಕ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು.

ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಸಾರ್ವಜನಿಕರ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ!

ಆರು ತಿಂಗಳ ಹಿಂದೆಯೇ ಮೃತಪಟ್ಟ ನಗರಾಭಿವೃದ್ಧಿ ಇಲಾಖೆ ಇಂಜಿನಿಯರ್ ಈಗ ಸೇಡಂನಿಂದ ಮಡಿಕೇರಿಗೆ ವರ್ಗಾವಣೆ!

ನ್ಯೂ ಹೇರ್‌ ಸ್ಟೈಲ್‌ನಲ್ಲಿ  ಕಾಣಿಸಿಕೊಂಡ ಯಶ್:  ವಿಡಿಯೋ ವೈರಲ್

ನೃತ್ಯ ಪ್ರದರ್ಶನ ವೇಳೆ ಜೀವಂತ‌ ಕೋಳಿಯ ರಕ್ತ ಹೀರಿದ ಕಲಾವಿದ: ನೃತ್ಯತಂಡದ ವಿರುದ್ಧ ಅಕ್ರೋಶ, ಕೇಸ್ ದಾಖಲು

TAGGED:Alleged misappropriation of funds in Arasu Truck Terminal Corporation: Former BJP MLC Veeriah arrested
Share This Article
Facebook Twitter Copy Link Print
Previous Article ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಸಾರ್ವಜನಿಕರ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ!
Next Article ಆನೆಯ ಡೆಡ್ಲಿ ಅಟ್ಯಾಕ್‌ನಿಂದ ಬೇಲೂರಿನ ವ್ಯಕ್ತಿ ಪಾರು: ವಿಡಿಯೊ ಭಾರೀ ವೈರಲ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?