newsics.com
ಯಶ್ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ‘ಕೆಜಿಎಫ್ 2’ ಅವರ ಬದಕುನ್ನು ಬದಲಾಯಿಸಿದೆ. ಅವರನ್ನು ಎಲ್ಲರೂ ಗುರುತಿಸುತ್ತಾರೆ. ಕನ್ನಡ ಮಾತ್ರವಲ್ಲದೆ ವಿದೇಶದಲ್ಲೂ ಅವರು ಹೆಸರು ಮಾಡಿದ್ದಾರೆ.
ಸದ್ಯ ಯಶ್ ಸಾಲು ಸಾಲು ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ನಟ ಯಶ್ ರಾವಣನಾಗಿ ಮಿಂಚಲು ಸಜ್ಜಾಗಿದ್ದಾರೆ. ಈ ಮಧ್ಯೆ ನಟ ಯಶ್ ಮತ್ತೊಂದು ಹೊಸ ಕಾರನ್ನು ಖರೀದಿ ಮಾಡಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ನಟ ಯಶ್ ಅವರ ಬಳಿ ಈಗಾಗಲೇ ಹಲವಾರು ಐಶಾರಾಮಿ ಕಾರುಗಳಿವೆ. ಈಗ ಅಷ್ಟು ಕಾರುಗಳ ಜೊತೆಗೆ ಮತ್ತೊಂದು ದುಬಾರಿ ಕಾರು ಸೇರ್ಪಡೆಯಾಗಿದೆ.
ಇದೀಗ ಆ ಹೊಚ್ಚ ಹೊಸ ಕಾರನ್ನು ನಟ ಯಶ್ ಮುಂಬೈನಲ್ಲಿ ಖರೀದಿಸಿದ್ದಾರೆ. ಯಶ್ ಖರೀದಿ ಮಾಡಿರುವ ಲೆಕ್ಸಸ್ನ ಎಲ್ಎಂ 350ಎಚ್ 4ಎಸ್ ಅಲ್ಟ್ರಾ ಲೆಕ್ಷುರಿ ಕಾರಿನ ಬೆಲೆ ಸುಮಾರು 3 ಕೋಟಿ. ಈ ಕಾರಿನ ಎಕ್ಸ್ ಶೋರೂಂ ಬೆಲೆಯೇ 2.65 ಕೋಟಿ ರೂಪಾಯಿಗಳಿದೆ.
ವಿಶೇಷವೆಂದರೆ ಮಹಾರಾಷ್ಟ್ರದಲ್ಲಿ ಈ ಕಾರಿನ ನೊಂದಣಿಯನ್ನು ನಟ ಯಶ್ ಮಾಡಿಸಿದ್ದಾರೆ. ಇದೇ ಕಾರಿನಲ್ಲಿ ಮುಂಬೈ ಏರ್ ಪೋರ್ಟ್ಗೆ ರಾಕಿ ಭಾಯ್ ಬಂದಿಳಿದ್ದಾರೆ. ಯಶ್ ಹೊಸ ಕಾರ್ ಮೇಲೆ MH47C 8055 ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಈಗಾಗಲೇ ಯಶ್ ಬಳಿ ಇರೋ ಎಲ್ಲಾ ಕಾರ್ಗಳ ನಂಬರ್ ಪ್ಲೇಟ್ 8055 ಇದೇ ನಂಬರಿನಲ್ಲಿದೆ.