newsics.com
ಸ್ಯಾಂಡಲ್ವುಡ್ ಗೋಲ್ಡನ್ ಸ್ಟಾರ್ ಗಣೇಶ್ ಕೃಷ್ಣಂ ಪ್ರಣಯ ಸಖಿ ಚಿತ್ರದ ಬಳಿಕ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಪಿನಾಕ, ಯುವರ್ ಸಿನ್ಸಿಯರ್ಲಿ ರಾಮ್, ಭರ್ಜರಿ ಚೇತನ್ ನಿರ್ದೇಶನದ ಚಿತ್ರಗಳಲ್ಲಿ ನಟ ಗಣೇಶ್ ನಟಿಸುವುದರಲ್ಲಿ ಬ್ಯುಸಿಯಾಗಿದ್ದಾರೆ.
ನಟ ಗಣೇಶ್ ಜುಲೈ 2 ರಂದು 48ನೇ ವರ್ಷಕ್ಕೆ ಕಾಲಿಡ್ತಿದ್ದಾರೆ. ಈ ನಡುವೆ ಗಣೇಶ್ ಅಭಿಮಾನಿಗಳಿಗೆ ಮುಂಚಿತವಾಗಿಯೇ ಸಂದೇಶ ರವಾನೆ ಮಾಡಿ ನಿರಾಸೆ ಮೂಡಿಸಿದ್ದಾರೆ
ಈ ಬಗ್ಗೆ ಖುದ್ದು ನಟ ಗಣೇಶ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಜುಲೈ 2 ನಾನು ಹುಟ್ಟಿದ ದಿನ. ಸಹಜವಾಗಿ ನನಗದು ನಿಮ್ಮ ಪ್ರೀತಿ ಹಾಗೂ ಅಭಿಮಾನವನ್ನು ಅತ್ಯಂತ ಸಮೀಪದಿಂದ ಕಣ್ಣುಂಬಿಕೊಂಡು ಸಂಭ್ರಮಿಸುವ ದಿನ. ಆದರೆ ಈ ಬಾರಿ ನಾನು ‘ಪಿನಾಕ’ ಹಾಗೂ ‘Your Sincerely ರಾಮ್’ ಚಿತ್ರಗಳ ಹೊರಾಂಗಣ ಚಿತ್ರೀಕರಣಗಳಲ್ಲಿ ಭಾಗವಹಿಸಬೇಕಿರುವ ಕಾರಣ ಜುಲೈ 2ರಂದು ನಾನು ನಿಮ್ಮೆಲ್ಲರನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ನಿಮ್ಮನ್ನು ರಂಜಿಸುವುದಕ್ಕಿಂತ ದೊಡ್ಡ ಹಬ್ಬನನಗೆ ಮತ್ತೊಂದಿಲ್ಲ. ಆದ ಕಾರಣ ಯಾರೂ ಮನೆಯ ಬಳಿ ಬರದೆ, ಕಷ್ಟದಲ್ಲಿರುವವರಿಗೆ ನೇರವಾಗುವ ಮೂಲಕ ತಾವುಗಳು ಇದ್ದಲ್ಲಿದಂಲೇ ನನಗೆ ಆಶಿಸಿ ಆಶೀರ್ವದಿಸಬೇಕೆಂದು ಈ ಮೂಲಕ ವಿನಂತಿಸುತ್ತೇನೆ.
ಆದ್ರೆ, ಹುಟ್ಟು ಹಬ್ಬಕ್ಕೂ ಮುನ್ನ ಫ್ಯಾನ್ಸ್ಗೆ ಹೊಸ ಫೋಟೋಶೂಟ್ ಮೂಲಕ ಗಿಫ್ಟ್ ಕೊಟ್ಟಿದ್ದಾರೆ ಗೋಲ್ಡನ್ ಸ್ಟಾರ್.
https://www.instagram.com/p/DLgj0YsvWay/?igsh=NGlvbmVoaWJrZ3du