newsics.com
ಹಾಸನ: ನವವಿವಾಹಿತೆಯೊಬ್ಬರ ಶವ ರೈಲ್ವೆ ಹಳಿ ಮೇಲೆ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ವಿದ್ಯಾ (24) ಮೃತಪಟ್ಟ ದುರ್ದೈವಿ.
ದಾವಣಗೆರೆ ಜಿಲ್ಲೆಯ ಅಣಜಿ ಗ್ರಾಮದ ವಿದ್ಯಾ ಹಾಗೂ ಸೋಮಲಾಪುರ ಗ್ರಾಮದ ಶಿವು ಆರು ತಿಂಗಳ ಹಿಂದೆ ಮದುವೆಯಾಗಿದ್ರು. ಅಲ್ಲದೇ ವಿದ್ಯಾ ಪತಿ ಬೆಂಗಳೂರಿನ ಶಂಕರಿಪುರಂನಲ್ಲಿ ಪೊಲೀಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಪತಿ-ಪತ್ನಿ ಇಬ್ಬರೂ ಬೆಂಗಳೂರಿನ ಶಂಕರಪುರಂ ನಲ್ಲಿ ವಾಸವಾಗಿದ್ದರು. ಎರಡು ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾ ಇಂದು ಅರಸೀಕೆರೆ ರೈಲ್ವೆ ಟ್ರ್ಯಾಕ್ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ.
ಪತಿ ಕುಟುಂಬ ಸದಸ್ಯರಿಂದಲೇ ಮಗಳ ಹತ್ಯೆ ಎಂದು ವಿದ್ಯಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ