newsics.com
ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆ ತನ್ನ ಆರ್ಭಟವನ್ನು ಮುಂದುವರೆಸಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಇದೀಗ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಜುಲೈ 1 ರಿಂದ ಜುಲೈ 5, 2025ರವರೆಗೆ ವ್ಯಾಪಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಜುಲೈ 3, 2025ರಂದು (ನಾಳೆ) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. .