newsics.com
ಬೆಂಗಳೂರು; ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರೆದಿದ್ದು, ಇಂದು ಅನೇಕ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು, ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ಎನ್ಆರ್ ಪುರ, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನಾದ್ಯಂತ ಮಳೆಯಾದ ಪರಿಣಾಮ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಜೋರಾಗಿದ್ದು, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲೂ ಶಾಲಾ ಕಾಲೇಜಿಗೆ ರಜೆ
ಕೊಡಗು ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಜುಲೈ 3, 2025ರಂದು (ನಾಳೆ) ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Today’s prediction ಇಂದಿನ ರಾಶಿ ಭವಿಷ್ಯ, 03-07-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?