newsics.com
ಇಂದು ರಾಮಾಯಣ’ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಆಗಿದೆ. ಕೇವಲ ಒಂದು ನಿಮಿಷದ ಟೀಸರ್ ಇದಾಗಿದೆ.
ಗ್ಲಿಂಪ್ಸ್ ಅನ್ನು ಬೆಂಗಳೂರಿನ ನೆಕ್ಸಸ್ ಮಾಲ್ ಸೇರಿದಂತೆ ವಿವಿಧ ನಗರಗಳಲ್ಲಿ ಬೇರೆ ಬೇರೆ ಐಮ್ಯಾಕ್ಸ್ ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ.
ರಾಮಾಯಣ ಫಸ್ಟ್ ಟೈಟಲ್ ಟೀಸರ್ ಅನ್ನು ರಾಕಿಂಗ್ ಸ್ಟಾರ್ ಯಶ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹತ್ತು ವರ್ಷಗಳ ಆಕಾಂಕ್ಷೆ. ಸಾರ್ವಕಾಲಿಕ ಶ್ರೇಷ್ಠ ಮಹಾಕಾವ್ಯವನ್ನು ಜಗತ್ತಿಗೆ ತರುವ ನಿರಂತರ ದೃಢನಿಶ್ಚಯ. ರಾಮಾಯಣವನ್ನು ಅತ್ಯಂತ ಗೌರವದಿಂದ ಪ್ರಸ್ತುತಪಡಿಸಲು ವಿಶ್ವದ ಕೆಲವು ಅತ್ಯುತ್ತಮ ವ್ಯಕ್ತಿಗಳು ಒಟ್ಟಾಗಿ ಶ್ರಮಿಸಿದ್ದಾರೆ. ಅದರ ಫಲಿತಾಂಶ ಇದು ಎಂದು ಯಶ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಟೀಸರ್ನಲ್ಲಿ ಸಿನಿಮಾದಲ್ಲಿ ನಟಿಸಿರುವವರ ಹೆಸರು, ತಂತ್ರಜ್ಞರ ಹೆಸರುಗಳನ್ನು ತೋರಿಸಲಾಗಿದೆ. ಇದಕ್ಕೆ ‘ಗೇಮ್ ಆಫ್ ಥ್ರೋನ್ಸ್’ ಅನ್ನು ನೆನಪಿಸುವಂತಿದೆ ಆ ಶೈಲಿ. ಸಿನಿಮಾಕ್ಕೆ ‘ರಾಮಾಯಣ’ ಎಂದು ಹೆಸರಿಡಲಾಗಿದ್ದು, ‘ನಮ್ಮ ಸತ್ಯ, ನಮ್ಮ ಇತಿಹಾಸ’ ಎಂಬ ಅಡಿಬರಹ ಕೊಡಲಾಗಿದೆ. ಟೀಸರ್ನ ಕೊನೆಯ ಕೆಲವು ಸೆಕೆಂಡುಗಳಿದ್ದಾಗ, ರಣ್ಬೀರ್ ಕಪೂರ್ ಮರದಿಂದ ಹಾರಿ ಬಿಲ್ಲು ಹೊಡೆಯುತ್ತಿರುವ ದೃಶ್ಯ ಕಾಣಿಸಿಕೊಳ್ಳುತ್ತದೆ. ಅದರ ಬಳಿಕ ಯಶ್ ರಾವಣನ ವೇಷದಲ್ಲಿರುವ ದೃಶ್ಯವಿದೆ. ಆದರೆ ಯಶ್ ಅವರ ಒಂದು ಕಣ್ಣನ್ನು ಮಾತ್ರವೇ ಟೀಸರ್ನಲ್ಲಿ ತೋರಿಸಲಾಗಿದೆ. ಮಿಕ್ಕಂತೆ ಇನ್ಯಾವ ಪಾತ್ರಗಳ ದೃಶ್ಯಗಳನ್ನೂ ಸಹ ತೋರಿಸಲಾಗಿಲ್ಲ.
ರಾಮಾಯಣ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಪೂರ್, ಸೀತೆ ಪಾತ್ರದಲ್ಲಿ ಸಾಯಿಪಲ್ಲವಿ ಹಾಗೂ ರಾವಣನ ಪಾತ್ರದಲ್ಲಿ ಕೆಜಿಎಫ್ ಸ್ಟಾರ್ ಯಶ್ ಕಾಣಿಸಿಕೊಂಡಿದ್ದಾರೆ
ನಿನ್ನೆ ತೆರವು ಮಾಡಿದ್ದ ಪಾಕಿಸ್ತಾನದ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ ಅಕೌಂಟ್ ಮತ್ತೆ ಬ್ಯಾನ್