newsics.com
ಚೆನ್ನೈ: ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ತಮಿಳುನಾಡು ಮುಖ್ಯಸ್ಥ ಕೆ. ಆರ್ಮ್‌ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ ಎಂದು ಚೆನ್ನೈ ಪೊಲೀಸರು ತಿಳಿಸಿದ್ದಾರೆ.
ಬಿಎಸ್‌ಪಿ ರಾಜ್ಯ ಮುಖ್ಯಸ್ಥರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ತಿರುವೆಂಗಡಂನನ್ನು ಚೆನ್ನೈನ ಮಾಧವರಂ ಬಳಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಿರುವೆಂಗಡಂ ಕೊಲೆಗೂ ಮುನ್ನ, ಬಿಎಸ್‌ಪಿ ನಾಯಕನ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಿಸಿಕೊಂಡು ಹಲವು ದಿನಗಳ ಕಾಲ ಆರ್ಮ್‌ಸ್ಟ್ರಾಂಗ್‌ನನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ.
ಆರ್ಮ್‌ಸ್ಟ್ರಾಂಗ್ ಅವರನ್ನು ಜುಲೈ 5 ರಂದು ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿನ ಅವರ ನಿವಾಸದ ಬಳಿ ಆರು ಅಪರಿಚಿತ ವ್ಯಕ್ತಿಗಳು ಕೊಂದು ಹಾಕಿದ್ದರು.
ಬೈಕ್‌ನಲ್ಲಿ ಬಂದ ವ್ಯಕ್ತಿಗಳ ಗುಂಪು ಆರ್ಮ್‌ಸ್ಟ್ರಾಂಗ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿತ್ತು. ಮಾರಣಾಂತಿಕವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಕನಿಷ್ಠ 11 ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ ‘ನಥಿಂಗ್’… ಮೂರೇ ಗಂಟೆಯಲ್ಲಿ ಒಂದು ಲಕ್ಷ ಮೊಬೈಲ್ ಮಾರಾಟ!
ಲವ್ ದೋಖಾ… ನಟ ರಾಜ್ ತರುಣ್ ಪ್ರೇಯಸಿ ಲಾವಣ್ಯ ಆತ್ಮಹತ್ಯೆ ಹೈಡ್ರಾಮಾ, ನಟನ ವಿರುದ್ಧ ವಂಚನೆ ದೂರು